UN networks

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಹಾಗೂ ಅಲೆಮಾರಿ ಅರೆ ಆಲೆಮಾರಿ ನಿಗಮದ ಅಧ್ಯಕ್ಷರಾಗಿರುವ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ವಿಧಾನ ಸೌಧದ ಸಚಿವÀರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ನೀಡಿದರು. ಮನವಿಗೆ ಸ್ಪಂದಿಸಿದ ಸಚಿವರು ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದರು.
