ಕಿನ್ಯ : ಬಿಜೆಪಿ ಅಧಿಕಾರದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದು, ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯನ್ನು ನೀಡಿದ್ದು, ಈ ಹಿನ್ನಲೆಯಲ್ಲಿ ಮೀನಾದಿಯಲ್ಲಿ ಬಾವಿ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಮೋನಪ್ಪ ಭಂಡಾರಿ ಅಭಿಪ್ರಾಯಪಟ್ಟರು.
ಅವರು ಕಿನ್ಯ ಗ್ರಾಮದ ಮೀನಾದಿಯಲ್ಲಿ ತನ್ನ ವಿಧಾನ ಪರಿಷತ್ ಅವಧಿಯಲ್ಲಿ ಮಂಜೂರಾದ 3 ಲಕ್ಷರೂ. ಅನುದಾನದಲ್ಲಿ ನಿರ್ಮಾಣಗೊಂಡ ತೆರೆದ ಬಾವಿ ಅಭಿವೃದ್ಧಿಯನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಮೋಹನ್ ದಾಸ್ ಶೆಟ್ಟಿ ಕಿನ್ಯ, ಬಿಜೆಪಿ ಯುವ ಮೋರ್ಚಾ ಕ್ಷೇತ್ರ ಕಾರ್ಯದರ್ಶಿ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಗ್ರಾಮ ಪಂಚಾಯತ್ ಸದಸ್ಯ ಶೇಖರ್ ಮಾರ್ಲ, ಸತೀಶ್ ಶೆಟ್ಟಿ ಕಿನ್ಯ, ಸದಾಶಿವ ಆಚಾರ್ಯ, ಗಿರೀಶ್, ಶೀನ ಉಪಸ್ಥಿತರಿದ್ದರು.
ಮೋಹನ್ ದಾಸ್ ಶೆಟ್ಟಿ ನೆತ್ತಿಲ ಸ್ವಾಗತಿಸಿದರು.