ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಸೋಮೇಶ್ವರ : ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿದರೆ ಯಾವುದನ್ನು ಸಾಧಿಸಬಹುದು ಎನ್ನುವುದಕ್ಕೆ ಸೋಮೇಶ್ವರ ಗ್ರಾಮ ಪಂಚಾಯತ್ ಸಾಕ್ಷಿಯಾಗಿದ್ದು, ಬಿಜೆಪಿ ಆಡಳಿತವಿರುವ ಈ ಪಂಚಾಯತ್ ನಲ್ಲಿ ಪ್ರತೀ ಚುನಾವಣೆ ನಡೆಯುವಾಗ ಹೆಚ್ಚು ಹೆಚ್ಚು ಸದಸ್ಯರನ್ನು ಆಯ್ಕೆ ಮಾಡಿರುವ ಹೆಗ್ಗಳಿಕೆಯನ್ನು ಹೊಂದಿದೆ ಎಂದು ಜಿಲ್ಲಾ ಪಂಚಾಯತ್ ಉಪಾದ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯಪಟ್ಟರು.
ಅವರು ಕೋಟೆಕಾರಿನ ನೂರ್ ಮಹಲ್ ನಲ್ಲಿ ಸೋಮೇಶ್ವರ ಗ್ರಾಮ ಪಂಚಾಯತ್ ನ ವಿಜೇತ ಸದಸ್ಯರಿಗೆ ಮತ್ತು ಚುನಾವಣಾ ಸಂದರ್ಭದಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಯಾವುದೇ ಗ್ರಾಮ ಪಂಚಾಯತ್ ನಲ್ಲಿ ಅಕಾರದಲ್ಲಿರುವ ಪಕ್ಷದ ವಿರುದ್ಧ ಜನರು ಮತ ಚಲಾಯಿಸುವುದು ಸಾಮಾನ್ಯ ಆದರೆ ಸೋಮೇಶ್ವರ ಗ್ರಾಮ ಪಂಚಾಯತ್ ನಲ್ಲಿ ಕಳೆದ 1997ರಿಂದ ಭಾರತೀಯ ಜನತಾ ಪಕ್ಷದ ಆಡಳಿತದ್ದು, ಪ್ರತೀ ಬಾರಿಯೂ ಹೆಚ್ಚು ಸದಸ್ಯರನ್ನು ಜನರು ಆಯ್ಕೆ ಮಾಡಿದ್ದಾರೆ.ಈ ಬಾರಿ ಬಿಜೆಪಿ ಇತಿಹಾಸ ನಿರ್ಮಿಸಿದ್ದು, ಗರಿಷ್ಠ 45 ಸದಸ್ಯರು ಆಯ್ಕೆಯಾಗುವ ಮೂಲಕ ಸೋಮೇಶ್ವರ ಗ್ರಾಮ ಪಂಚಾಯತ್ ಇತರ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಮಾದರಿಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಾತನಾಡಿ ಉತ್ತಮ ಯೋಚನೆ ಯೋಜನೆಯನ್ನು ಹೊಂದಿರುವ ರಾಜೇಶ್ ಉಚ್ಚಿಲ್ ಅವರು ಅಧ್ಯಕ್ಷರಾಗಿದ್ದು, ಉಚ್ಚಿಲ್ ಅವರ ಯೋಜನೆ ಎಲ್ಲಾ ಬಿಜೆಪಿ ಸದಸ್ಯರು ಬೆಂಬಲಿಸಿದರೆ ರಾಜ್ಯದಲ್ಲೇ ಸೋಮೇಶ್ವರವನ್ನು ಮಾದರಿ ಗ್ರಾಮ ಪಂಚಾಯತ್ ಆಗಿ ಹೆಸರು ಪಡೆಯಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಂಗಳೂರು ಕ್ಷೇತ್ರಧ್ಯಾಕ್ಷ ಚಂದ್ರಶೇಖರ್ ಉಚ್ಚಿಲ್ ವಹಿಸಿದ್ದರು.
ತಾಲೂಕು ಪಂಚಾಯತ್ ಸದಸ್ಯರಾದ ಧನ್ಯವತಿ, ಜಿಲ್ಲಾ ಮುಖಂಡರಾದ ಚಂದ್ರಹಾಸ ಅಡ್ಯಂತಾಯ ಕುತ್ತಾರುಗುತ್ತು, ಜಿಲ್ಲಾ ಸಮಿತಿ ಸದಸ್ಯರಾದ ನಮಿತಾ ಶ್ಯಾಂ, ಚರಣ್ರಾಜ್, ಕ್ಷೇತ್ರ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟ್ಟು, ಹರೀಶ್ ಅಂಬ್ಲಮೊಗರು, ಕೋಟೆಕಾರ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೇಖರ್ ಕನೀರುತೋಟ, ಸೋಮೇಶ್ವರ ಗ್ರಾಮ ಪಂಚಾಯತ್ ಅದ್ಯಕ್ಷ ರಾಜೇಶ್ ಎ. ಉಚ್ಚಿಲ್, ಉಪಾಧ್ಯಕ್ಷೆ ಸುಶೀಲ ನಾಯಕ್, ಸೋಮೇಶ್ವರ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಗಟ್ಟಿ, ಉಪಸ್ಥಿತರಿದ್ದರು.
ಕ್ಷೇತ್ರ ಪ್ರ. ಕಾರ್ಯದರ್ಶಿ ಯಶವಂತ ಅಮೀನ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸೋಮೇಶ್ವರ ಗ್ರಾಮ ಸಮಿತಿ ಪ್ರ. ಕಾರ್ಯದರ್ಶಿ ಮನೋಜ್ ಕಟ್ಟೆಮನೆ ವಂದಿಸಿದರು.