ಕೈರಂಗಳ: ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಕೃಷಿಯನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಕಳೆದ ಮೂರು ವರುಷಗಳಿಂದ ಕೃಷಿ ಮೇಳವನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿದ್ದು, ಈ ಬಾರಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಕೃಷಿ ಮೇಳದೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಡಿ. 6,7ಮತ್ತು 8ರಂದು ಶಾರದಾ ಗಣಪತಿ ವಿದ್ಯಾಕೇಂದ್ರದ ಮೈದಾನದಲ್ಲಿ ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಹಾಗೂ ಕೃಷಿ ಮೇಳವನ್ನು ಸ್ಥಳೀಯರ ಸಹಕಾರದೊಂದಿಗೆ ನಡೆಯಲಿದೆ.



ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಲಾ ಸಂಚಾಲ?ಕರಾದ ಟಿ .ಜಿ .ರಾಜಾರಾಮ ಭಟ್ ರಾಜ್ಯಮಟ್ಟದ ಶಿಕ್ಷಣ ,ಉದ್ಯೋಗ ,ಕೃಷಿ ಮೇಳ ದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿಯ ಬಳಿಕ ಯಾವ ರೀತಿಯ ವಿದ್ಯಾಭ್ಯಾಸ ಮತ್ತು ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು ಶಿಕ್ಷಣ ತಜ್ಞರು ಮತ್ತು ಉದ್ಯೋಗ ತಜ್ಞರು ಮಾಹಿತಿಗಳನ್ನು ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಶ್ರೇಷ್ಠ ಭಾರತ್ ಪರಿಕಲ?್ಪನೆಯ ಹಿನ್ನೆಲೆಯಲ್ಲಿ ಕೃಷಿಯನ್ನು ಯಾವ ರೀತಿಯಲ್ಲಿ ಮುನ್ನಡೆಸಬಹುದೆನ್ನುದರ ಕುರಿತು ಕೃಷಿ ತಜ್ಞರುಗಳು ಮಾಹಿತಿಯನ್ನು ನೀಡಲಿದ್ದಾರೆ ಜೊತೆಗೆ ಗ್ರಾಮೀಣ ಭಾಗದ ಕೃಷಿಕರಿಗೆ ಬಹು ಉಪಯೋಗಕಾರಿಯಾಗಲಿದೆ ಎಂದರು.
ರಾಜ್ಯದಾದ್ಯAತ ಈ ಮೇಳದಲ್ಲಿ ಭಾಗವಹಿಸಲ?Ä ಹೆಸರು ನಮೂದಿಸಿದ್ದು, ಒಟ್ಟು 37 ಕಾಲೇಜುಗಳನ್ನು ಒಟ್ಟಾಗಿಸುವ ಮೂಲ?ಕ ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳ ಕೋರ್ಸುಗಳ ಪರಿಚಯದೊಂದಿಗೆ ಪದವೀಧರ ನಿರುದ್ಯೋಗಿಗಳಿಗಾಗಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ವಿವಿಧ ಕಂಪೆನಿಗಳು ಭಾಗವಹಿಸಲಿದೆ. ಇದರೊಂದಿಗೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಬಲ?್ಲಂತಹ ಯಂತ್ರೋಪಕರಣಗಳು, ಸಾವಯವ ಬಿ?ತ್ತನೆ ಬಿ?Ãಜಗಳು, ರಸಗೊಬ್ಬರಗಳು , ನಾಟಿಗೆ ಯೋಗ್ಯವಾದ ನರ್ಸರಿಗಳು ಹಾಗೂ ರಾಜ್ಯದ ವಿವಿಧ ಕಡೆಗಳಿಂದ ನರ್ಸರಿಯವರು ಭಾಗವಹಿಸಲಿದ್ದಾರೆ. ಇದೊಂದಿಗೆ ಮನೋರಂಜನಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು,
ಡಿ .6ರಂದು ಬೆಳಗ್ಗೆ ನಡೆಯುವ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರಕುಮಾರ್ ನೆರವೇರಿಸಲಿದ್ದಾರೆ. ಸ್ಕ್ಯಾಡ್ ಲಿಮಿಟೆಡ್ ಮಂಗಳೂರು ಇದರ ಅಧ್ಯಕ್ಷರಾದ ರವೀಂದ್ರ ಕಂಬಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಶಾಸಕರಾದ ಕಿಶೋರ್ ಕುಮಾರ್ ಬೊಟ್ಯಾಡಿ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿಗಳು ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ರಾಜ್ಯಮಟ್ಟದ ಈ ಮೇಳಗಳ ಅಧ್ಯಕ್ಷರಾದ ಜಯರಾಮ ಶೆಟ್ಟಿ ಕಂಬಳಪದವು, ಕಾರ್ಯದರ್ಶಿ ನವೀನ್ ಕುಮಾರ್, ಸಲ?ಹೆಗಾರರಾದ ಉಪೇಂದ್ರ ನಾಯಕ್ ಮೂಡಬಿ?ದಿರೆ, ಜೊತೆ ಕಾರ್ಯದರ್ಶಿಗಳಾದ ವಿಶ್ವನಾಥ್ ಕಡ್ವಾಯಿ, ರಂಜಿತ್ ಮಿತ್ತಾವು, ಪ್ರಾಂಶುಪಾಲ? ಅರುಣ್ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.