ಉಳ್ಳಾಲ್ ನ್ಯೂಸ್ ನೆಟ್ ವರ್ಕ್


ಮುಡಿಪು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ ದಕ್ಷಿಣವಲಯ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಚಾಂಪಿಯನ್ ಆಗಿ ಹೊರಹೊಮ್ಮಿದೆ.



ಮಂಗಳೂರು ವಿವಿ ತಂಡವು ಅಣ್ಣಾಮಲೈ ವಿಶ್ವವಿದ್ಯಾನಿಲಯವನ್ನು 22-18, ಭಾರತಿದಾಸನ್ ವಿಶ್ವವಿದ್ಯಾನಿಲಯವನ್ನು 28-14 ಹಾಗೂ ಮದ್ರಾಸ್ ವಿಶ್ವವಿದ್ಯಾನಿಲಯದೊಂದಿಗೆ ನಡೆದ ಪಂದ್ಯಾಟದಲ್ಲಿ ಸಮಬಲವನ್ನು ಸಾಧಿಸಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು ದಕ್ಷಿಣ ವಲಯ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ತಂಡದಲ್ಲಿ ದಿವಾಕರ್(ಕಪ್ತಾನ), ನಾಗರಾಜ್ ನಾಯ್ಕ್(ಉಪನಾಯಕ) ಧನರಾಜ್, ಪ್ರವೀಣ್ ಕುಮಾರ್, ಜಸ್ವಂತ್, ಹರ್ಷಿತ್, ಸಂತೋಷ್, ಮೂರ್ತಿ, ಜಾಯ್ಸನ್, ಮಲ್ಲಿಕಾರ್ಜುನ್, ವಿಕ್ರಾಂತ್, ವಿಜಯ್ ಸಚಿನ್ ಭಾಗವಹಿಸಿದ್ದರು. ತರಬೇತುದಾರರಾಗಿ ಸತೀಶ್ ನಾಯ್ಕ್ ಮತ್ತು ಕಿರಣ್ ಕುಮಾರ್, ವ್ಯವಸ್ಥಾಪಕರಾಗಿ ಎಲಿಯಾಸ್ ಪಿಂಟೋ ಭಾಗವಹಿಸಿದ್ದರು.
ದಕ್ಷಿಣವಲಯ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 25 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದು ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ. ಅವರು ತಿಳಿಸಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಬೈರಪ್ಪ ಹಾಗೂ ಕುಲಸಚಿವ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ತಂಡದ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.