ಉಳ್ಳಾಲ್ ನ್ಯೂಸ್ ನೆಟ್ ವರ್ಕ್


ಕೊಲ್ಯ : ಬೈಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ಗೆ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟಿನಲ್ಲಿ ಭಾನುವಾರ ನಡೆದಿದ್ದು ಗಂಭೀರ ಗಾಯಗೊಂಡವರನ್ನು ಕೊಲ್ಯ ನಿವಾಸಿ ಸಚಿನ್ ಮತ್ತು ವಿವೇಕಾನಂದ ಎಂದು ಗುರುತಿಸಲಾಗಿದೆ.



ವಿವೇಕಾನಂದ ಮಂಗಳೂರು ಕಡೆಯಿಂದ ಕೊಲ್ಯಕ್ಕೆ ಹೋಗಲು ಸಚಿನ್‍ರವರ ಬೈಕ್‍ನಲ್ಲಿ ಸಂಚರಿಸುತ್ತಿದ್ದರು. ಬೈಕ್ ತೊಕ್ಕೊಟ್ಟು ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಬಸ್ ಬೈಕ್‍ಗೆ ಡಿಕ್ಕಿ ಹೊಡೆದಿದ್ದು ಹೊಡೆದ ರಭಸಕ್ಕೆ ಬೈಕ್‍ನಲ್ಲಿದ್ದ ಇಬ್ಬರು ಸವಾರರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂ„ಸಿದಂತೆ ಬಸ್ ಚಾಲಕನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.