ಮಾಡೂರು: ಶಿರಡಿ ಸಾಯಿಬಾಬಾ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕೋಟೆಕಾರು : ಕೋಟೆಕಾರು ಮಾಡೂರಿನ ಕೊಂಡಾಣ ರಸ್ತೆಯ ಸಾಯಿಧಾಮ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿರಡಿ ಸಾಯಿಬಾಬಾ ಗುರುಗಳ ಮಂದಿರದಲ್ಲಿ ಬಿಂಬ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಬೀರಿ ಶ್ರೀ ಸಿದ್ಧಿವಿನಾಯಕ ಮಂದಿರದಿಂದ ಸಾಯಿಧಾಮ ಬಡಾವಣೆವರೆಗೆ ನಡೆಯಿತು.