



ಮಂಗಳೂರು: ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಅಭಿಷೇಕ್ ವಾಲ್ಮೀಕಿ ಇವರನ್ನು ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳ ಅಡಿಯಲ್ಲಿ ರಚಿಸಲಾದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾಗಿ ನೇಮಿಸಲಾಗಿದೆ. ಮಾ.13 ರಂದು ಅಪರ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಉಪ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕೃತವಾಗಿ ನೇಮಕಾತಿ ನಡೆಯಿತು. ಬಳಿಕ ನಡೆದ ಪ್ರಥಮ ಸಭೆಯಲ್ಲಿ ಭಾಗವಹಿಸಿದರು. ಅಭಿಷೇಕ್ ವಾಲ್ಮೀಕಿ ಇವರು ಸಮುದಾಯದ ಹಿತಾಸಕ್ತಿಗಾಗಿ ಸದಾ ಶ್ರಮಿಸುವ ಮೂಲಕ ಯುವ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಹಲವು ಬಾರಿ ತಮ್ಮ ಸಮುದಾಯದ ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಧ್ವನಿ ಎತ್ತುವ ಮೂಲಕ ಪರಿಹಾರವನ್ನು ದೊರಕಿಸಿ ಕೊಡುವಲ್ಲಿ ಶ್ರಮವಹಿಸಿದ್ದರು. ಇವರ ಈ ಸಾಧನೆಗೆ ಹಿತೈಷಿಗಳು, ವಾಯ್ಸ್ ಆಫ್ ಸ್ಟೂಡೆಂಟ್ಸ್ ವಿದ್ಯಾರ್ಥಿ ಸಂಘಟನೆಯ ಸರ್ವ ಸದಸ್ಯರು ಹಾಗೂ ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.