ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್
ಉಳ್ಳಾಲ; ಅಂದಿನ ಕಾಲದಲ್ಲಿ ತಂತ್ರಜ್ಞಾನದಂತಹ ವ್ಯವಸ್ಥೆ ಇಲ್ಲದಿದ್ದರೂ ಉಳ್ಳಾಲದ ರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ದ ಒಗ್ಗಟ್ಟು ಹಾಗೂ ಸಾಹಸದಿಂದ ಹೋರಾಡಿದ ಮಹಿಳೆಯಾಗಿದ್ದಾರೆ. ಅವರ ಆದರ್ಶ, ಸಾಹಸ, ಮಾನವೀಯ ಮೌಲ್ಯಗಳು ನಮಗೆಲ್ಲರಿಗೂ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಹಂಪಿ, ಸಂಗೊಳ್ಳಿ ರಾಯಣ್ಣಸ ಸಹಿತ ರಾಜ್ಯದಲ್ಲಿ ನಡೆಯುತ್ತಿರುವ ದೊಡ್ಡ ಮಟ್ಟದ ಉತ್ಸವದಂತೆಯೇ ಅಬ್ಬಕ್ಕ ಉತ್ಸವ ನಡೆಯಲಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.






















ಸರ್ಕಾರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ವೀರರಾಣಿ ಅಬ್ಬಕ್ಕ ಉತ್ಸವ-2017 ಉದ್ಘಾಟಿಸಿ ಅವರು ಮಾತನಾಡಿದರು.
ಅಬ್ಬಕ್ಕನ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪ್ರಚುರಪಡಿಸಲು ಬೆಂಗಳೂರು ಮಾತ್ರವಲ್ಲದೆ ದೆಹಲಿಯಲ್ಲಿಯೂ ಕೂಡಾ ಕನ್ನಡ ಸಂಘ ಸಂಸ್ಥೆಗಳ ಸಹಕಾರದಿಂದಲೂ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ ತೊಕ್ಕೊಟ್ಟಿನಲ್ಲಿ ಅಬ್ಬಕ್ಕ ಭವನ ನಿರ್ಮಾಣಗೊಳ್ಳುತ್ತಿದ್ದು ಇದು ಎಂಟು ಕೋಟಿ ಅನುದಾನದಲ್ಲಿ ಸುಸಜ್ಜಿತ ಕಟ್ಟಡವಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.
ಅಬ್ಬಕ್ಕ ಎಲ್ಲರಿಗೂ ಪ್ರೇರಣಾ ಶಕ್ತಿಯಾಗಿರಬೇಕು, ಸಮಸ್ಯೆ ಬಂದಾಗ ಮುಂದೆ ನಿಂತು ನ್ಯಾಯ ಕೊಡುವ ಶಕ್ತಿ ಆಗಬೇಕು. ಹಿಂದೆ ಸೌಕರ್ಯಗಳ ಕೊರತೆಯಿದ್ದಾಗಲೂ ಮಾನವೀಯತೆ ಇತ್ತು, ಆದರೆ ಇಂದು ರಸ್ತೆಯಲ್ಲಿ ವ್ಯಕ್ತಿ ಗಾಯಗೊಂಡು ಬಿದ್ದರೆ ಫೊಟೋ ಕ್ಲಿಕ್ಕಿಸುತ್ತಾರೆಯೇ ಹೊರತು ಆಸ್ಪತ್ರೆಗೆ ಕೊಂಡೊಯ್ಯುವಷ್ಟು ಸಹಾನುಭೂತಿ, ಮಾನವೀಯತೆ ಇಲ್ಲ. ಉತ್ಸವ ಆರಂಭಿಸುವ ಸಂದರ್ಭ ಇದ್ದ ಒಗ್ಗಟ್ಟು ಮುಂದುವರಿಯಬೇಕು. ಯುವ ಸಮುದಾಯ ಮಾನವೀಯ ಮೌಲ್ಯದೊಂದಿಗೆ ರಾಣಿ ಅಬ್ಬಕ್ಕಳ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿದರು.
ಭಾನುವಾರ ನಡೆಯಲಿರುವ ವಿವಿಧ ಗೋಷ್ಠಿಗಳನ್ನು ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ತಹಶೀಲ್ಧಾರ್ ಮಹದೇವಪ್ಪ, ಕನ್ನಡ ಸಂಸ್ಕøತಿ ಇಲಾಖೆಯ ರವಿಕುಮಾರ್, ದ.ಕ.ಕ್ರೀಡಾಧಿಕಾರಿ ಪ್ರದೀಪ್ ಡಿಸೋಜಾ,
ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಅಲಿ, ಉಪಾಧ್ಯಕ್ಷೆ ಲಲಿತಾ ಎಸ್.ರಾವ್, ಪಜೀರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ, ತಾ.ಪಂ.ಸದಸ್ಯೆ ಪದ್ಮಾವತಿ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಉಮೇಶ್, ಕೊಂಕಣಿ ಅಕಾಡೆಮಿಯ ರಾಯ್ ಕ್ಯಾಸ್ಟಲಿನೋ, ರಘುರಾಮ ಕಾಜವ ಪಟ್ಟೋರಿ, ಸುರೇಶ್ ಚೌಟ, ಸಂಕಪ್ಪ ಕರ್ಕೇರಾ ವಿವಿಧ ಇಲಾಖೆಯ ಅಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಸದಸ್ಯ ದಿನಕರ ಉಳ್ಳಾಲ್ ಸ್ವಾಗತಿಸಿದರು. ಮಾಜಿ ಶಾಸಕ ಕೆ..ಜಯರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಉದ್ಘಾಟಿಸಿದರು. ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ಅಜೀಝ್ ವಂದಿಸಿದರು.
ಅಬ್ಬಕ್ಕ ಉತ್ಸವ ಪ್ರಯುಕ್ತ ದೇರಳಕಟ್ಟೆಯಿಂದ ಅಸೈಗೋಳಿಯ ಉತ್ಸವ ವೇದಿಕೆಯವರೆಗೆ ಜಾನಪದ ದಿಬ್ಬಣ ಮೆರವಣಿಗೆ ವಿಜೃಂಭಣೆಯಿಂದ ಜರಗಿತು.


