ಉಳ್ಳಾಲ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ನಗರಸಭೆಯಲ್ಲಿ ಉತ್ತಮ ಕೆಲಸ ಮಾಡಿದರೆ ಮತದಾರರು ಸದಾ ಬೆಂಬಲಿಸುತ್ತಾರೆ ಎನ್ನುವುದಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್ನ ಅಭೂತಪೂರ್ವ ಗೆಲವು ಉದಾಹರಣೆಯಾಗಿದ್ದು, ನೂತನವಾಗಿ ಚುನಾಯಿತರಾದ ಸದಸ್ಯರು ಇನ್ನಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳವ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಉಳ್ಳಾಲ್ ಅಭಿಪ್ರಾಯಪಟ್ಟರು.

ಅವರು ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಉಳ್ಳಾಲ ನಗರಸಭೆ ಎರಡು ವಾರ್ಡುಗಳಿಗೆ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಉಳ್ಳಾಲ ಕಾಂಗ್ರೇಸ್ ನೂತನ ನಗರ ಸಭಾ ಸದಸ್ಯರಾಗಿ ಚುನಾಯಿತರಾದ ಬಾಝಿಲ್ ಡಿ’ಸೋಜಾ ಮತ್ತು ಉಸ್ಮಾನ್ ಕಲ್ಲಾಪು ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ವಹಿಸಿದ್ದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹರ್ಷರಾಜ್ ಮುದ್ಯ, ನಗರಸಭಾ ಅಧ್ಯಕ್ಷ ಹುಸೇನ್ ಕುಂಇïಮೋನು, ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಮುಸ್ತಾಫ ಹರೇಕಳ, ಟಿ.ಸಿ. ಅಬ್ದುಲ್ಲ, ರಮೇಶ್ ಕೊಲ್ಯ, ಸುರೇಶ್ ಭಟ್ನಗರ, ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಸುರೇಖ ಚಂದ್ರಹಾಸ್, ಸದಸ್ಯರಾದ ಮಹಮ್ಮದ್ ಮುಕ್ಕಚ್ಚೇರಿ, ಎ.ಎ. ಇಸ್ಮಾಯಿಲ್, ಮುಸ್ತಾಫ, ರಝಿಯಾ ಇಬ್ರಾಹಿಂ, ತಾಲೂಕು ಪಂಚಾಯತ್ ಸದಸ್ಯರಾದ ಸಿದ್ದಿಕ್, ವಿಲ್ಮಾ ಡಿ’ಸೋಜಾ, ಲಕ್ಷ್ಮೀ, ಸುಹಾಸಿನಿ ಬಬ್ಬುಕಟ್ಟೆ, ದೇವಕಿ, ಹಮೀದ್ ಕಿನ್ಯ, ವಿನೋದ್, ರವಿ ಕಾಪಿಕಾಡ್, ಸುಲೇಮಾನ್ , ಯು.ಟಿ. ಮಹಮ್ಮದ್ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್ ಸ್ವಾಗತಿಸಿದರು.


