ಉಳ್ಳಾಲ ನ್ಯೂಸ್ ನೆಟ್ ವರ್ಕ್
ಕಲ್ಲಾಪು: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದ್ದು, ಸಹಸವಾರ ಮೃತನ ಸಹೋದರ ಗಂಭೀರ ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಟಿ.ಸಿ.ರೋಡಿನ ಅಕ್ಕರೆಕೆರೆ ನಿವಾಸಿ ಮಯ್ಯದ್ದಿ ಎಂಬವರ ಪುತ್ರ ಸಂಶುದ್ದೀನ್ (23) ಮೃತರು. ಸಹೋದರ ಸಹಸವಾರ ವಾಸಿಂ (16) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದಾರೆ. ಬೆಳಿಗ್ಗೆ ಮನೆಯಿಂದ ಸಹೋದರನ ಜತೆಗೆ ಧಕ್ಕೆಗೆ ಕೆಲಸಕ್ಕೆ ತೆರಳುವ ಸಂದರ್ಭ ಘಟನೆ ಸಂಭವಿಸಿದೆ. ಸ್ಕೂಟರಿನಲ್ಲಿ ತೆರಳುವ ಸಂದರ್ಭ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಶುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡ ಸಹಸವಾರನನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಶುದ್ದೀನ್ ಅವಿವಾಹಿತರಾಗಿದ್ದು, ಧಕ್ಕೆಯಲ್ಲಿ ಬಾಕ್ಸ್ ಮಾರಾಟದ ಕೆಲಸ ನಿರ್ವಹಿಸುತ್ತಿದ್ದರು.
ಸಹೋದರ ವಾಸಿಂ ಧಕ್ಕೆಯಲ್ಲಿ ಅವರ ತಂದೆಗಿರುವ ಸ್ವಂತ ಹೊಟೇಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಐವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಮತ್ತು ತಂದೆ , ತಾಯಿಯನ್ನು ಅಗಲಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


