ಉಳ್ಳಾಲ ನ್ಯೂಸ್ ನೆಟ್ ವರ್ಕ್
ಸೋಮೇಶ್ವರ:ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಜನಸೇವೆ ನಡೆಸಿದ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಆಡಳಿತ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಸೋಮನಾಥೇಶ್ವರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಹಿಂದಿನ ಹುಟ್ಟುಹಬ್ಬದ ಸಂದರ್ಭ ಸೋಮನಾಥ ದೇವರಿಗೆ ಪೂಜೆ ಸಲ್ಲಿಸಿದಂತೆ ಅವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಬಾರಿ ಪೂಜೆ ಸಲ್ಲಿಸಿದ ಫಲವಾಗಿ ಮುಂದೆ ರಾಜ್ಯದ ಮುಖ್ಯಮಂತ್ರಿಯಾಗಿ ಚುನಾಯಿತರಾಗಲಿದ್ದಾರೆ. ಈ ಮೂಲಕ ಕಲ್ಯಾಣ ಕರ್ನಾಟಕವನ್ನು ರೂಪಿಸಲಿದ್ದಾರೆ ಎಂದರು.
ಈ ಸಂದರ್ಭ ಸೌಮ್ಯಾ.ಆರ್.ಶೆಟ್ಟಿ, ಸೋಮೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕುತ್ತಾರ್, ಬಿಜೆಪಿ ಮುಖಂಡರಾದ ಚಮದ್ರಶೇಖರ್ ಉಚ್ಚಿಲ್, ಯಶವಂತ ಅಮೀನ್, ಉದಯ ಶೆಟ್ಟಿ ಸೊಳ್ಳೆಂಜೀರು, ಸುಜಿತ್ ಮಾಡೂರು, ಗೋಪಿನಾಥ್ ಬಗಂಬಿಲ, ದಯಾನಂದ ತೊಕ್ಕೊಟ್ಟು, ಶಿವಪ್ರಸಾದ್ ಕಿನ್ಯಾ, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.
ಜಾನುವಾರು ಪೋಷಣೆ,
ಕೆರೆ ಅಭಿವೃದ್ಧಿಗೆ ಕರೆ :
ಯಡಿಯೂರಪ್ಪನವರು ಈ ಬಾರಿ ಅಭಿಮಾನಿಗಳಲ್ಲಿ ಹುಟ್ಟುಹಬ್ಬ ಆಚರಣೆಯನ್ನು ಆಡಂಭರವಾಗಿ ನಡೆಸದಂತೆ ಸೂಚಿಸಿದ್ದಾರೆ. ಒಂದು ವೇಳೆ ಆಚರಿಸುವುದಿದ್ದರೂ ಸುತ್ತಮುತ್ತಲಿನ ಕೆರೆಗಳ ಅಭಿವೃದ್ಧಿ ಅಥವಾ ಜಾನುವಾರುಗಳ ಪೋಷಣೆಗೆ ಸಹಕರಿಸಿ ಎಂದು ಸಲಹೆ ನೀಡಿದ್ದರು. ಅದರಂತೆ ರವೀಂದ್ರ ಶೆಟ್ಟಿ ಇವರು ಪಜೀರು ಗೋವನಿತಾಶ್ರಯದಲ್ಲಿರುವ 100 ಕ್ಕೂ ಅಧಿಕ ಜಾನುವಾರುಗಳಿಗೆ ಬೈಹುಲ್ಲು ವಿತರಿಸಿದರು.








