ಉಳ್ಳಾಲ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಮಂಗಳೂರು ಬಂದ್ ಹಿನ್ನಲೆಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಿದ 5 ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಚೆಂಬುಗುಡ್ಡೆ ನಿವಾಸಿ ರಜೀತ್(19), ತೊಕ್ಕೊಟ್ಟು ಭಟ್ನಗರ ನಿವಾಸಿ ಆತೀಶ್(22), ಮಂಜೇಶ್ವರ ನಿವಾಸಿಗಳಾದ ದಿನೇಶ್(25) ಸಂತೋಷ್ ಕುಮಾರು(28) ನವೀನ್(25) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳೆಲ್ಲರೂ ಮಂಗಳೂರು ಬಂದ್ ನ ಹಿಂದಿನ ದಿನವಾದ ಫೆ.24ರ ತಡ ರಾತ್ರಿ ಕೋಟೆಕಾರು ಬೀರಿ ಮತ್ತು ತಲಪಾಡಿಯಲ್ಲಿ ಕೇರಳ ಸಾರಿಗೆ ಬಸ್ಸುಗಳಿಗೆ ಕಲ್ಲೆಸೆದು ಹಾನಿಗೊಳಿಸಿದ್ದರು. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ತನಿಖೆ ಕೈಗೆತ್ತಿಗೊಂಡು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


