Site icon Ullalavani

ಸೇತುವೆಯಿಂದ ಉರುಳಿದ ಬಸ್ಸ್ 9 ಸಾವು

ವಿಜಯವಾಡ :ಸೇತುವೆಯಿಂದ ಬಸ್ ನದಿಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ.

ದಿವಾಕರ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ ವೈಜಾಗ್ ನಿಂದ ಹೈದರಾಬಾದ್ ಗೆ ತೆರಳುವಾಗ ಘಟನೆ ನಡೆದಿದ್ದು, ಗಾಯಾಳುಗಳಲ್ಲಿ 17 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಇನ್ನು ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.

 

ಕೃಪೆ: ನ್ಯೂಸ್ ಕನ್ನಡ

 

Exit mobile version