ಉಳ್ಳಾಲ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಕ್ರೀಡಾ ಕ್ಷೇತ್ರಕ್ಕೆ ನಿಟ್ಟೆ ವಿಶ್ವವಿದ್ಯಾನಿಲಯ ಬಹಳ ಕೊಡುಗೆಗಳನ್ನು ನೀಡಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎಂ.ಎಸ್ ಮೂಡಿತ್ತಾಯ ಹೇಳಿದ್ದಾರೆ.
ಅವರು ದೇರಳಕಟ್ಟೆ ಕ್ಷೇಮ ಕ್ಯಾಂಪಸ್ಸಿನ ಕ್ರೀಡಾಂಗಣದಲ್ಲಿ ಮಂಗಳವಾರ ಜರಗಿದ 4ನೇ ನಿಟ್ಟೆ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಅಥ್ಲೆಟಿಕ್ ಮೀಟ್ -2017 ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷೇಮ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇಮ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ , ಫಾಮ9ಸಿ ಕಾಲೇಜು ಪ್ರಾಂಶುಪಾಲ ಡಾ. ಸಿ.ಯಸ್ ಶಾಸ್ತ್ರಿ, ಫಿಸಿಯೋಥೆರಪಿ ಕಾಲೇಜು ಪ್ರಾಂಶುಪಾಲ ಡಾ. ದನೇಶ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಫಾತಿಮಾ ಉಪಸ್ಥಿತರಿದ್ದರು.
ಆಕ್ಷಿ ಶರ್ಮ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ವಿಭಾಗದ ಸಲಹೆಗಾರ ಡಾ.ಮುರಳಿಕೃಷ್ಣನ್ ಸ್ವಾಗತಿಸಿದರು. ದೈಹಿಕ ವಿಭಾಗದ ಮುಖ್ಯಸ್ಥ ಕರುಣಾಕರ ಶೆಟ್ಟಿ ವಂದಿಸಿದರು.


