ಉಳ್ಳಾಲ ನ್ಯೂಸ್ ನೆಟ್ ವರ್ಕ್
ಕಣಚೂರು: ಕ್ಷಯ ರೋಗವನ್ನು ಸಮಗ್ರ ರೀತಿಯಲ್ಲಿ ಸಂಪೂರ್ಣವಾಗಿ ನಿಗ್ರಹಿಸುವ ಅನಿವಾರ್ಯತೆ ಇದ್ದು, ಈ ನಿಟ್ಟಿನಲ್ಲಿ ಕಣಚೂರು ಆಸ್ಪತ್ರೆ ಅರಿವು ಕಾರ್ಯಕ್ರಮವನ್ನು ಆಯೋಜಿಸಿರುವ ಕಾರ್ಯ ಶ್ಲಾಘನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು.
ಅವರು ನಾಟೆಕಲ್‍ನ ಕಣಚೂರು ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಕ್ಷಯ ರೋಗ ಜಾಗೃತಿ ಬಗ್ಗೆ ಮಾಹಿತಿ ಮತ್ತು ಬಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ವೈದ್ಯಕೀಯ ಸಂಸ್ಥೆಗಳು ಜನರ ಬಗೆಗಿನ ಪ್ರಮುಖವಾಗಿ ಕಾಳಜಿ ವಹಿಸಬೇಕು. ಹೆಚ್‍ಐವಿ ಮತ್ತು ಕ್ಷಯ ರೋಗಿಗಳ ಆರಂಭಿಕ ಪತ್ತೆ ಮತ್ತು ಚಿಕಿತ್ಸೆ ಒದಗಿಸುವುದು ಸೂಕ್ತ . ಇದನ್ನು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಜನರಲ್ಲಿ ಅರಿವು ಮೂಡಿಸಲು ಮುಂದಾಗಿರುವ ಕಣಚೂರು ಆಸ್ಪತ್ರೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದರು.
ರಾಜೀವ ಗಾಂಧಿ ಆರೋಗ್ಯ ವಿe್ಞÁನ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿನ ಉಪಕುಲಪತಿ ಡಾ| ಕೆ.ಎಸ್. ರವೀಂದ್ರನಾಥ್, ಇಂಡಿಯನ್ ಕ್ರಿಕೆಟ್ ತಂಡದ ಮಾಜಿ ಫಿಸಿಯೋಥೆರಪಿಸ್ಟ್ ಡಾ| ಆಲಿ ಇರಾನಿ, ವೈದೇಹಿ ಇನ್‍ಸ್ಟಿಟ್ಯೂಷನ್ಸ್‍ನ ನಿರ್ದೇಶಕಿ ಡಿ.ಎ. ಕಲ್ಪಜಾ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ , ಜಿಲ್ಲಾ ಕ್ಷಯ ರೋಗ ಅಧಿಕಾರಿ ಡಾ| ಬದ್ರುದ್ಧೀನ್, ಕಣಚೂರು ವೈದ್ಯಕೀಯ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ| ದೇವಿ ಪ್ರಸಾದ್ ಶೆಟ್ಟಿ, ರಾಜೀವ ಗಾಂಧಿ ಆರೋಗ್ಯ ವಿe್ಞÁನ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಯು.ಟಿ. ಇಫ್ತಿಕಾರ್ ಆಲಿ, ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಅಬ್ದುಲ್ ರಹೆಮಾನ್, ಆಡಳಿತಾಧಿಕಾರಿ ಡಾ| ರೋಹನ್ ಮೊನಿಸ್, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸುಹೈಲ್ ಉಪಸ್ಥಿತರಿದ್ದರು.
ಸ್ವಾಗತ ಕಣಚೂರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ವಿರೂಪಾಕ್ಷ ಸ್ವಾಗತಿಸಿದರು. ಕಣಚೂರು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಶಾಂತಿ ಲೋಬೋ ಕಾರ್ಯಕ್ರಮ ನಿರ್ವಹಿಸಿದರು. ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಶೀತಲ್ ವಂದಿಸಿದರು.


