Site icon Ullalavani

ಕಾರುಗಳ ಡಿಕ್ಕಿ: ಓರ್ವ ಸಾವು

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಕಾಸರಗೋಡು: ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು,ಮತ್ತೊರ್ವ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.

ಮೃತಪಟ್ಟವರನ್ನು ಕಾಸರಗೋಡು ಆಲಂಪಾಡಿ ಅಬ್ದುಲ್ ರಜಾಕ್ (34) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಕಸ್ಟಮ್ಸ್ ಅಧಿಕಾರಿ ವಿಪಿನ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಝಿಕೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಮಂಜೇಶ್ವರದಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ತಲುಪಿಸಿದರೂ ರಜಾಕ್ ಮೃತಪಟ್ಟರು.

ಸೌದಿಯಲ್ಲಿ ಉದ್ಯೋಗದಲ್ಲಿದ್ದ ರಜಾಕ್ ಕೆಲ ತಿಂಗಳ ಹಿಂದೆ ನಡೆದ ಸಹೋದರ ಅಜೀಜ್ ನ್ ವಿವಾಹಕ್ಕೆ0ದು ಊರಿಗೆ ಬಂದಿದ್ದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Exit mobile version