ಉಳ್ಳಾಲ ನ್ಯೂಸ್ ನೆಟ್ ವರ್ಕ್
ಬಾಳೆಪುಣಿ : ಮಹಾತ್ಮಾ ಗಾಂಧಿ ರಾಷ್ಟಿ ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವಿವಿಧ ಕಾಮಗಾರಿ ನಡೆಸಲು ಅವಕಾಶವಿದ್ದು ಈ ಮೂಲಕ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗ್ರಾಮದ ಅತಿ ಹೆಚ್ಚಿನ ಬೇಡಿಕೆ ಈಡೇರಿಸಿಕೊಳ್ಳಲು ಸಾಧ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಡಾ.ಎಂ.ಆರ್.ರವಿ ಹೇಳಿದರು.
ಬಾಳೆಪುಣಿ ಗ್ರಾಮ ಪಂಚಾಯಿತಿಯ ಹೂ ಹಾಕುವ ಕಲ್ಲಿನ ಜಿ.ಪ.ಹಿ.ಪ್ರಾ. ಶಾಲೆಯ ರಂಗಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬಂಟ್ವಾಳ ತಾಲೂಕು ಪಂಚಾಯಿತಿ, ಕುರ್ನಾಡು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಾಳೆಪುಣಿ, ನರಿಂಗಾನ, ಪಜೀರು, ಇರಾ ಹಾಗೂ ಕುರ್ನಾಡು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಜನಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಕೊಳವೆ ಬಾವಿ ತೋಡಿ ನೀರು ಸಿಗದಿರುವುದು ಸಾಮಾನ್ಯವಾಗಿಬಿಟ್ಟಿದ್ದು ಅದಕ್ಕಾಗಿ ಬದಲಿ ಪರಿಹಾರ ಅಗತ್ಯವಿದೆ. ಹಾಗಾಗಿ ನೂರಾರು ವರ್ಷದಿಂದ ಮುಚ್ಚಿ ಹೋಗಿರುವ ಕೆರೆಯನ್ನು ಮರಳಿ ತೋಡಲು, ಹೂಳೆತ್ತಲು ಬಹಳಷ್ಟು ನೆರವು ಸಿಗುತ್ತಿದ್ದು ಈ ಯೋಜನೆಯ ಬಗ್ಗೆ ಹೆಚ್ಚಿನ ಆಸಕ್ತಿಯಿಂದ ತೊಡಗಿಸಿಕೊಂಡರೆ ಮುಂದಿನ ಕೆಲವೇ ವರ್ಷಗಳಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ. ಮಂಗಳೂರು ಕ್ಷೇತ್ರಕ್ಕೆ ಕುಡಿಯುವ ನೀರನ್ನು ಒದಗಿಸಲು 50ಲಕ್ಷ ರೂ. ಅನುದಾನ ಮಂಜೂರಾಗಿದ್ದು ಅಗತ್ಯವಿದ್ದವರು ಸಂಬಂಧಪಟ್ಟ ಪಂಚಾಯಿತಿಗೆ ಮಾಹಿತಿ ನೀಡಿದರೆ ತಕ್ಷಣವೇ ಸ್ಪಂದಿಸಲಾಗುವುದು ಎಂದರು.
ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಆರ್. ಕರ್ಕೇರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್, ಬಂಟ್ವಾಳ ತಾಲೂಕು ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್, ಪಂಚಾಯತ್‍ರಾಜ್ ಎಂಜಿನಿಯರಿಂಗ್ ವಿಭಾಗ ಸಹಾಯಕ ಕಾರ್ಯಕಾರಿ ಅಭಿಯಂತರ ನರೇಂದ್ರ ಬಾಬು, ಬಂಟ್ವಾಳ ತಾಲೂಕು ವಲಯ ಅರಣ್ಯ ಅ„ಕಾರಿ, ಬಂಟ್ವಾಳ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಿರಾಂದ, ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅ„ಕಾರಿ ಸಿಪ್ರಿಯನ್ ಮಿರಾಂದ, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ಬಾಳೆಪುಣಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವನಿತಾ ಬಿ. ರೈ, ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಪ್ರಗತಿ ಪರಿಶೀಲನೆ ಸಮಿತಿ ಸದಸ್ಯ ನರಿಂಗಾನ ಎನ್. ಪದ್ಮನಾಭ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಲೋಕೇಶ್, ಜಿಲ್ಲಾ ವಯಸ್ಕರ ಶಿಕ್ಷಣ ಅ„ಕಾರಿ ಸುಧಾಕರ್, ಸಮಾಜ ಕಲ್ಯಾಣ ಇಲಾಖೆಯ ಅ„ಕಾರಿ ಸಂತೋಷ್ ಹಾಗೂ ಜಿಲ್ಲಾ ನೆರವು ಘಟಕದ ಅ„ಕಾರಿ ಮಂಜು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ಹೈದರ್ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.