ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ಆನಂದಾಶ್ರಮ ಪ್ರೌಢಶಾಲೆ ಸೋಮೇಶ್ವರ ಇಲ್ಲಿನ ವಿದ್ಯಾರ್ಥಿನಿಯರು ಸರಕಾರಿ ಪ್ರೌಢಶಾಲೆ ಅಳಿಯೂರು, ಮೂಡಬಿದಿರೆ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ, ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಪ್ರಥಮಸ್ಥಾನ ಪಡೆದು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿದ್ದಾರೆ. ತಂಡದ ಸದಸ್ಯರೊಂದಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂದೀಪ್ ರಾಜ್ ಮಾಡೂರು ಉಪಸ್ಥಿತರಿದ್ದರು.



