ಉಳ್ಳಾಲ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ನಿಟ್ಟೆ ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಉತ್ತಮ ಮೂಲಭೂತ ಸೌಕರ್ಯವನ್ನು ಒದಗಿಸಲಾಗುತ್ತಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪ್ರೊ. ಶಾಂತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ವೈದ್ಯಕೀಯ ಮತ್ತು ದಂತ ಕಾಲೇಜುಗಳ ದಕ್ಷಿಣ ಭಾರತ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟ `7ನೇ ನಿಟ್ಟೆ ಎಕೊಲೇಡ್ಸ್ 2017’ಕ್ಕೆ ಚಾಲನೆ ನೀಡಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಉತ್ತಮ ಮೈದಾನ ನಿರ್ಮಾಣ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ಕೆಲಸ ಸಂಸ್ಥೆಯ ವತಿಯಿಂದ ನಡೆದಿದೆ. ನಿಟ್ಟೆ ಎಕೋಲೆಡ್ಸ್ಂತಹ ಕ್ರೀಡಾಕೂಟದಲ್ಲಿ ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳವುದರ ಮೂಲಕ ಶಿಕ್ಷಣದೊಂದಿಗೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇಮದ ಡೀನ್ ಡಾ| ಸತೀಶ್ ಕುಮಾರ್ ಭಂಡಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್ ಡಾ| ಶಿವಕುಮಾರ್ ಹೀರೆಮಠ್ ಕ್ಷೇಮ ವೈಸ್ ಡೀನ್ ಮತ್ತು ಮೆಡಿಸಿನ್ ವಿಭಾಗ ಮುಖ್ಯಸ್ಥ ಡಾ| ಪಿ.ಎಸ್. ಪ್ರಕಾಶ್, ವೈಸ್ ಡೀನ್ ಡಾ| ಅಮೃತ್ ಮಿರಾಜ್ಕರ್, ಎ.ಬಿ. ಶೆಟ್ಟಿ ಸ್ಮಾರಕ ದಂತ ವಿe್ಞÁನ ಕಾಲೇಜಿನ ಪ್ರಾಂಶುಪಾಲ ಡಾ| ಯು.ಎಸ್.ಕೃಷ್ಣ ನಾಯಕ್, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ| ಧನೇಶ್ ಕುಮಾರ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ| ಫಾತಿಮಾ ಡಿ.ಸಿಲ್ವ , ನಿರ್ದೇಶಕ ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.
ನಿಟ್ಟೆ ವಿ.ವಿ. ಕ್ರೀಡಾ ಸಲಹೆಗಾರ ಡಾ| ಮುರಳಿ ಕೃಷ್ಣ ವಿ. ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಅಜೀಷ್ ಸ್ಯಾಮ್ ಜಾರ್ಜ್ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾ ಕಾರ್ಯದರ್ಶಿ ಇರ್ಫಾನ್ ಹ್ಯಾರಿಸ್ ವಂದಿಸಿದರು.


