ಉಳ್ಳಾಲ ನ್ಯೂಸ್ ನೆಟ್ ವರ್ಕ್
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯದ ಅರಣ್ಯ ಸಚಿವ ರಮಾನಾಥ್ ರೈ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಅಸ್ಪತ್ರೆಗೆ ಗುರುವಾರ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರೈ ಅವರು ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಾಖಲು ಮಾಡಲಾಗಿದೆ ಹೊರತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಹೆಚ್ಚಿನ ಸಮಸ್ಯೆಯಿಲ್ಲ. ಬೇಗನೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಸಹೋದರ ದಶರಥ ರೈ ಹೇಳಿಕೆ ನೀಡಿದ ಬಗ್ಗೆ ಮಾಧ್ಯಮದಲ್ಲಿ ವರದಿಯಾಗಿದೆ.