ಉಳ್ಳಾಲ ನ್ಯೂಸ್ ನೆಟ್ ವರ್ಕ್
ಅಲಹಾಬಾದ್: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಮುಖಂಡ ಮೊಹಮ್ಮದ್ ಶಮಿ ಎಂಬುವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅಲಹಾಬಾದ್ ನ ಮೌವ್ ಐಮಾ ಎಂಬಲ್ಲಿ ಮೊಹಮ್ಮದ್ ಶಮಿ ಅವರ ಕಚೇರಿ ಬಳಿ ಕಾರು ಪಾರ್ಕ್ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಶಸ್ತ್ರ ಸರ್ಜಿತ ಆಗಂತಕರಿಬ್ಬರು ಶಮಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 60 ವರ್ಷದ ಮೊಹಮ್ಮದ್ ಶಮಿ ಗುಂಡೇಟಿನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಬಳಿಕ ಸ್ಥಳೀಯರು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು.


