ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಉಳ್ಳಾಲ : ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ಘಟಕ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಹೋಮಿಯೋಪತಿ ಪದವಿ ಹಾಗೂ ಹೋಮಿಯೋಪಥಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ 27 ನೇ ಪದವಿ ಪ್ರಧಾನ ಸಮಾರಂಭ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ದೇರಳಕಟ್ಟೆ ಸಭಾಂಗಣದಲ್ಲಿ ಮಾ.29 ರಂದು ಬೆಳಿಗ್ಗೆ 10.30 ಕ್ಕೆ ನಡೆಯಲಿದೆ ಎಂದುಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇದರ ಆಡಳಿತಾಧಿಕಾರಿ ಫಾ.ವಿನ್ಸೆಂಟ್ ಸಲ್ದಾನ್ಹ ಹೇಳಿದ್ದಾರೆ.
ದೇರಳಕಟ್ಟೆ ಫಾದರ್ ಮುಲ್ಲರ್ಸ್ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು 79 ಹೋಮಿಯೋಪತಿ ಪದವಿ ಹಾಗೂ 23 ಹೋಮಿಯೋಪತಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಈ ವರ್ಷ ಪದವಿ ಸ್ವೀಕರಿಸಲಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯನ್ನು ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಘೋಷಿಸಿದ ಮತ್ತು ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅವರಲ್ಲಿ 5 ಹೋಮಿಯೋಪಥಿ ರ್ಯಾಂಕ್, 7 ಹೋಮಿಯೋಪಥಿ ಸ್ನಾತಕೋತ್ತರ ಪದವಿ ರ್ಯಾಂಕ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಘೋಷಿಸಿದ 2 ಚಿನ್ನದ ಪದಕಗಳನ್ನು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪಡೆಯಲಿದ್ದಾರೆ.
ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ವಿಜಯ ಕುಮಾರ್, ಆಯುಷ್ ಇಲಾಖೆ ನಿರ್ದೇಶಕ ರಾಜ್ ಕಿಶೋರ್ ಸಿಂಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಗುರು ಹಾಗೂ ಫಾದರ್ ಮುಲರ್ ಸೇವಾ ಸಂಸ್ಥೆ ಅಧ್ಯಕ್ಷ ಡಾ.ಅಲೋಶಿಯಸ್ ಪೌಲ್ ಡಿಸೋಜಾ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಉಆಡಳಿತಾಧಿಕಾರಿ ಫಾ.ಸಿಲ್ವೆಸ್ಟರ್ ಲೋಬೊ, ಪ್ರಾಂಶುಪಾಲ ಡಾ.ಶಿವಪ್ರಸಾದ್ .ಕೆ, ಉಪಪ್ರಾಂಶುಪಾಲ ಡಾ.ಇ.ಎಸ್.ಜೆ ಪ್ರಭು ಕಿರಣ್, ಹೋಮಿಯೋಪತಿ ಮೆಟಿರಿಯಾ ಮೆಡಿಕಾದ ವಿಭಾಗ ಮುಖ್ಯಸ್ಥ ಡಾ. ಶ್ರೀನಾಥ್ ರಾವ್, , ಡಾ.ಬ್ಲ್ಯಾನಿ ಲೋಬೊ, , ಡಾ.ದೀಪಾ ಪಾಯ್ಸ್ ಹಾಗೂ ಡಾ.ಜಾನ್ ಪೌಲ್ ಉಪಸ್ಥಿತರಿದ್ದರು.