ಉಳ್ಳಾಲ ನ್ಯೂಸ್ ನೆಟ್ ವರ್ಕ್
ಮಂಗಳೂರು : ದೇಶ ಡಿಜಿಟಲೀಕರಣದತ್ತ ಮುಖ ಮಾಡುತ್ತಿದ್ದು ಗ್ರಾಹಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸಂಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುವುದು ಎಂದು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷ ಕೆ.ಜೈರಾಜ್ ಬಿ.ರೈ ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ನಿರ್ದೇಶಕರು ಹಾಗೂ ಶಾಖಾ ಸಲಹಾ ಸಮಿತಿಯ ಅಧ್ಯಕ್ಷ ಎಚ್.ರಾಮಯ ಶೆಟ್ಟಿ ಸಂಘವು ಸಹಕಾರಿ ತತ್ವದಡಿಯಲ್ಲಿ ಸ್ಥಾಪನೆಯಾಗಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿದೆ.ಗ್ರಾಹಕರ ಉತ್ತಮ ಸಹಕಾರದಿಂದ ಸಂಘವು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.ಕಳೆದ 8 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ವೆಲೆನ್ಸಿಯಾ ಶಾಖೆಯು ಹೆಚ್ಚು ಲಾಭದತ್ತ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಸಂಘದ ಮಹಾಪ್ರಬಂಧಕ ಗಣೇಶ್ ಜಿ.ಕೆ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ 5 ಜನ ಉತ್ತಮ ಗ್ರಾಹಕರೆಂದು ಪರಿಗಣಿಸಿ ಅವರು ಅಭಿನಂದಿಸಲಾಯಿತು.
ವೆಲೆನ್ಸಿಯಾ ಶಾಖೆಯ ಶಾಖಾ ವ್ಯವಸ್ಥಾಪಕರಾದ ಚಂದ್ರಹಾಸ ಶೆಟ್ಟಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು.
ಶಾಖಾ ಸಲಹಾ ಸಮಿತಿಯ ಸದಸ್ಯ ಎ.ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಶಾಖಾ ಸಲಹಾ ಸಮಿತಿಯ ಸದಸ್ಯ ಜೆ.ಜಯರಾಮ ಶೆಟ್ಟಿ ವಂದಿಸಿದರು.
