Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೋಟೆಕಾರು

ಕೋಟೆಕಾರು: 2017-18 ನೇ ಸಾಲಿನ ಬಜೆಟ್ ಸಭೆ

UllalaVaniBy UllalaVaniMarch 31, 2017No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತ್ ಆದ ನಂತರದ ಪ್ರಥಮ 2017-18 ನೇ ಸಾಲಿನ ಬಜೆಟ್ ಸಭೆ ಗುರುವಾರ ಪಂಚಾಯತ್‍ನಲ್ಲಿ ನಡೆದಿದ್ದು, ಒಟ್ಟು ಆದಾಯ 10.59 ಕೋಟಿ ಅನುದಾನದಡಿ ಲೆಕ್ಕಾಚಾರದಲ್ಲಿ ನಡೆದ ಬಜೆಟಿನಲ್ಲಿ 10.48 ಲಕ್ಷ ಖರ್ಚು ಅಂದಾಜಿಸಲಾಗಿದೆ ಮತ್ತು 10.60 ಲಕ್ಷ ಮಿಗತೆ ಬಜೆಟ್ ಮಂಡಿಸಲಾಗಿದ್ದು, ನೀರು ಮತ್ತು ಘನ ತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ಒತ್ತು ನೀಡುವ ಕುರಿತು ಚರ್ಚಿಸಲಾಯಿತು.

unnamedಸ್ವಯಂ ಘೋಷಿತ ಆಸ್ತಿ ತೆರಿಗೆ ಜಾರಿಯಲ್ಲಿ ರೂ. 1.60 ಲಕ್ಷ ಅಂದಾಜಿಸಿಲಾಗಿದೆ. ನೀರಿನ ಬಿಲ್ ಪಾವತಿಯಲ್ಲಿ ರೂ. 28 ಲಕ್ಷ, ನೀರಿನ ಅಭಾವ ಅನುದಾನದಡಿ ರೂ. 40 ಲಕ್ಷ, ವಿಪತ್ತು ನಿರ್ವಹಣಾ ಅನುದಾನದಡಿ ಜಿಲ್ಲಾಧಿಕಾರಿಯಿಂದ ರೂ. 20 ಲಕ್ಷ, ಪಟ್ಟಣ ಪಂಚಾಯಿತಿನ ರೂ. 30 ಲಕ್ಷ, ಕಟ್ಟಡ ಪರವಾನಿಗೆ ಮತ್ತು ಅಭಿವೃದ್ಧಿ ಶುಲ್ಕ ರೂ. 53 ಲಕ್ಷ , ಉದ್ದಿಮೆ ಪರವಾನಿಗೆಯಿಂದ ರೂ. 5 ಲಕ್ಷ , ಜಾಹೀರಾತು ಶುಲ್ಕ ರೂ. 25,000, ಘನತ್ಯಾಜ್ಯ ವಿಲೇವಾರಿ ಶುಲ್ಕ ರೂ. 11 ಲಕ್ಷ , ಉಪಕರಣಗಳ ಸಂಗ್ರಹಣೆ, ದಂಡ ವಸೂಲಿ ರೂ. 8.5 ಲಕ್ಷ , ಘನ ತ್ಯಾಜ್ಯ ಸಂಸ್ಕರಣಾ ಘಟಕದ ಕಂಪೌಂಡ್ ರೂ. 45 ಲಕ್ಷ ಒಟ್ಟು 2 ಕೋಟಿ 60 ಲಕ್ಷ ಅಂದಾಜಿಸಲಾಗಿದೆ.

ಅನಧಿಕೃತ ನೀರಿನ ಕನೆಕ್ಷನ್ನಿಗೆ ಬ್ರೇಕ್ : ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5,648 ಕುಟುಂಬಗಳಿದ್ದು, 2,300 ನೀರಿನ ಅಧಿಕೃತ ಕನೆಕ್ಷನ್ ಗಳು ಇವೆ. ಹಲವು ಅನಧಿಕೃತ ನೀರಿನ ಕನೆಕ್ಷನ್ ಗಳು ಇರುವುದರ ವಿರುದ್ಧ ಜೂನ್ ಬಳಿಕ ಕಾರ್ಯಾಚರಣೆ ನಡೆಸುವುದು. ನಳ್ಳಿ ನೀರಿನ ಜೋಡಣೆ ವಾಸ್ತವ್ಯಕ್ಕೆ ರೂ. 1,800 ಹಾಗೂ ವಾಣಿಜ್ಯಗಳಿಗೆ ರೂ. 4,000 ದಂತೆ ಶುಲ್ಕ ಪಾವತಿಸಲಾಗುವುದು ಮತ್ತು ಕಡ್ಡಾಯವಾಗಿ ಜೂನ್ ನಂತರ ಮೀಟರ್ ಅಳವಡಿಸಲಾಗುವುದು ಎಂದು ಮುಖ್ಯಾಧಿಕಾರಿ ತಿಳಿಸಿದರು.

ಕ್ರಿಯಾ ಯೋಜನೆಗಳು : 20 ಲಕ್ಷ ವೆಚ್ಚದಲ್ಲಿ ಪುಳಿತ್ತಡಿ ಎಂಬಲ್ಲಿ ತೆರೆದ ಬಾವಿಗೆ , ಮಾಡೂರು ಸ್ಮಶಾನ ಬಳಿ 1 ಲಕ್ಷ ಲೀಟರ್ ಸಾಮಥ್ರ್ಯದ ಓವರ್‍ಹೆಡ್ ಟ್ಯಾಂಕ್ ಹಾಗೂ ಕೊಳವೆ ಜಾಲ ಅಳವಡಿಕೆ, 25 ಲಕ್ಷ ರೂ ವೆಚ್ಚದಲ್ಲಿ ಪನೀರು ಸೈಟಿನಲ್ಲಿ ತೆರೆದಬಾವಿ ಹಾಗೂ2.50 ಲಕ್ಷ ಲೀ. ಸಾಮಥ್ರ್ಯದ ಓವರ್ ಹೆಡ್ ಟ್ಯಾಂಕ್ , ಮಾಡೂರು ದ್ವಾರದಿಂದ ಮಿತ್ರನಗರದವರೆಗೆ ರಸ್ತೆಗೆ ರೂ. 50 ಲಕ್ಷ ವೆಚ್ಚದಲ್ಲಿ ಫೇವರ್ ಫಿನಿಶ್ ಡಾಮರೀಕರಣ, ರೂ. 15 ಲಕ್ಷ ವಚ್ಚದಲ್ಲಿ ವಿಷ್ಣುಮೂರ್ತಿ ದೇವಸ್ಥಾನದಿಂದ ಬೆನಕ ಜನರಲ್ ಸ್ಟೋರಿನವರೆಗೆ ರಸ್ತೆ ಕಾಂಕ್ರೀಟಿಕರಣ, ರೂ. 15 ಲಕ್ಷ ವೆಚ್ಚದಲ್ಲಿ ಶಿವಾಜಿ ನಗರದಿಂದ ಶಾಂತಿಬಾಗ್ ರಸ್ತೆ ಅಭಿವೃದ್ಧಿ, ನಡಾರ್ ಎಂಬಲ್ಲಿ 13.23 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, ರೂ. 26.58 ಲಕ್ಷ ವೆಚ್ಚದಲ್ಲಿ ಪನೀರು ರಸ್ತೆಯ ಕೋಮರಂಗಳ ಎಂಬಲ್ಲಿ ಮಳೆ ನೀರು ಚರಂಡಿ ಅಭಿವೃದ್ಧಿ, ರೂ. 20 ಲಕ್ಷ ವೆಚ್ಚದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ನಿರ್ಮಾಣ, 15.67 ಲಕ್ಷ ವೆಚ್ಚದಲ್ಲಿ ಪಾಕ್ ್ ನಿರ್ಮಾಣ, ರೂ. 10 ಲಕ್ಷ ವೆಚ್ಚದಲ್ಲಿ ವಿವಿದೆಡೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ, ರೂ. 7.50 ಲಕ್ಷ ವೆಚ್ಚದಲ್ಲಿ 10 ಕಡೆಗಳಲ್ಲಿ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರಚಿಸಲಾಯಿತು.

ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆ ಮಾಡುತ್ತಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗುವುದು. 2017-18ನೇ ಸಾಲಿನಲ್ಲಿ ನೀರಿನ ಸಮಸ್ಯೆಗೆ ಹೆಚ್ಚಿನ ಒತ್ತನ್ನು ನೀಡುವ ನಿಟ್ಟಿನಲ್ಲಿ ಗ್ರಾಮದ ಕೆಲವು ಭಾಗಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣದ ಯೋಜನೆ ರೂಪಿಸಲಾಗಿದೆ ಎಂದು ಬಜೆಟಿನಲ್ಲಿ ತಿಳಿಸಲಾಯಿತು.
ಮುಖ್ಯಾಧಿಕಾರಿ ಪೂರ್ಣಕಲಾ, ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸೊಳ್ಳೆಂಜೀರು, ಉಪಾಧ್ಯಕ್ಷ ಅನಿಲ್ ಬಗಂಬಿಲ, ಸ್ಥಾಯಿ ಸಮಿತಿ ಅಧ್ಯಕ್ಷೆ ಭಾರತೀ ರಾಘವ ಭಾಗವಹಿಸಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
ಉಳ್ಳಾಲ

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

By UllalaVaniFebruary 5, 20260

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆಗೊಳಿಸಿದ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕರುಉಳ್ಳಾಲ: ಉಳ್ಳಾಲದ ಮಣ್ಣಿನಲ್ಲಿ ನಾವು ಖುಷಿಯಿಂದ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿರುವುದು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d