ಉಳ್ಳಾಲ ನ್ಯೂಸ್ ನೆಟ್ ವರ್ಕ್
ಮಾಡೂರು: ಕೊಂಡಾಣದ ಸಾಯಿಧಾಮ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ದ್ವಿತೀಯ ವಾರ್ಷಿಕೋತ್ಸವ ಮತ್ತು ರಾಮನವಮಿ ಉತ್ಸವವು ಎ.3 ಸೋಮವಾರ ರಿಂದ ಎಪ್ರಿಲ್ 4 ಮಂಗಳವಾರದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವಾರ್ಷಿಕೋತ್ಸವ ಹಾಗೂ ರಾಮನವಮಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ.
ಅವರು ಮಾಡೂರು ಸಾಯಿಧಾಮ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶನಿವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು ರಾಮನವಮಿಯ ಪ್ರಯುಕ್ತ ಸೋಮವಾರದಂದು ಬೆಳಿಗ್ಗೆ ವಿವಿಧ ತಂಡಗಳಿಂದ ಭಜನೆ ಸಂಕೀರ್ತನೆ ಹಾಗೂ ಸಂಜೆ ನಡೆಯುವ ಸಾಂಸ್ಕøತಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀನಿವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿ ಡಾ.ಎಂ.ಅಣ್ಣಯ್ಯ ಕುಲಾಲ್ ವಹಿಸಲಿದ್ದಾರೆ. ಶ್ರೀಕ್ಷೇತ್ರ ಕೊಂಡೆವೂರು ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಂದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶಿರ್ವಚನ ನೀಡಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಪ್ರಾಂತ ಸಹಸಂಪರ್ಕ ಪ್ರಮುಖ್ ಪ್ರಕಾಶ್ ಪಿ.ಎಸ್ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ, ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪ, ಶ್ರೀ ಸಾಯಿಗೋಲ್ದ್ ಪ್ಯಾಲೇಸ್ ಬೆಂಗಳೂರು ಇದರ ಮಾಲಕ ಡಾ.ಟಿ.ಎ.ಶರವಣ, ಲಕ್ಷ್ಮೀಶ್ ತಂತ್ರಿ, ಕೆ.ವಾಸುದೇವ ಶೆಟ್ಟಿ, ಕೆ.ಟಿ.ಸುವರ್ಣ, ಎ.ಜೆ.ಶೇಖರ್, ಉದಯ ಪೂಜಾರಿ, ಡಾ.ಆಶಾಜ್ಯೋತಿ ರೈ, ಸುರೇಶ್ ಕೆ.ಪಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದ ಅವರು ಎ.4 ಮಂಗಳವಾರದಂದು ಮಧ್ಯಾಹ್ನ 2.30ಕ್ಕೆ `ಕಬಂಧ ಮೋಕ್ಷ’ ಎಂಬ ಯಕ್ಷಗಾನ ತಾಳಮದ್ದಳೆ ಹಾಗೂ ಸಂಜೆ 6-45ಕ್ಕೆ ಪೇಟೆ ಸವಾರಿ-ಪಲ್ಲಕ್ಕಿ ಉತ್ಸವ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸಂಗೀತ ರಸಮಂಜರಿ ನಡೆಯಲಿದೆ ಎಂದು ತಿಳಿಸಿದರು.
ಈ ವೇಳೆ ಮಾಡೂರು ಶ್ರೀ ಸಾಯಿಬಾಬ ಮಂದಿರದ ಆಡಳಿತ ಮೊಕ್ತೇಸರ ಸುರೇಶ್ ಕೆ.ಪಿ, ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಸ್ವಾಗತ ಸಮಿತಿಯ ಗೋಪಿನಾಥ್ ಬಗಂಬಿಲ, ಪ್ರಚಾರ ಸಮಿತಿಯ ಸಂಚಾಲಕ ಅಮರನಾಥ್ ಮಾಡೂರು ಉಪಸ್ಥಿತರಿದ್ದರು.




