Site icon Ullalavani

ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮಂಗಳೂರು ವಿಧಾನ ಸಭಾ ಕ್ಷೇತ್ರ ನಾಂದಿಯಾಗಲಿ : ನಳಿನ್ ಕುಮಾರ್ ಕಟೀಲು

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ತೊಕ್ಕೊಟ್ಟು: ದೇಶದಾದ್ಯಂತ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣವಾಗುತ್ತಿದ್ದು, ಮುಂಬರುವ ಚುನವಣೆಯಲ್ಲಿ ಕರ್ನಾಟಕ ಕಾಂಗ್ರೆಸ್ ಮುಕ್ತವಾಗಲಿದ್ದು, ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿಯೂ ಬಿಜೆಪಿ ಶಾಸಕರು ಆಯ್ಕೆಯಾಗುವ ಮೂಲಕ ಪರಿವರ್ತನೆಯ ಪರ್ವ ಆರಂಭವಾಗಲಿದೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರ ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟರು .

ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಮಂಗಳೂರು ವಿಧಾನ ಸಭಾ ಕ್ಷೇತ್ರ ನೂತನ ಕಾರ್ಯಲಯದ ಉದ್ಘಾಟನೆಯ ಬಳಿಕ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಹಿಂದೆ ಕಾಂಗ್ರೆಸ್ ಸೇರಿದಂತೆ ಅದನ್ನು ಅನುಕರಿಸುತ್ತಿರುವ ಪಕ್ಷಗಳು ಮುಸ್ಲಿಂ ಕೈಸ್ತರು ಸೇರಿದಂತೆ ಜಾತಿ ಓಟು ಬ್ಯಾಂಕ್‍ಗಳ ಮೂಲಕ ಅ„ಕಾರಕ್ಕೆ ಏರುವ ಕನಸು ಕಂಡಿತ್ತು ಆದರೆ ಉತ್ತರ ಪ್ರದೇಶದಲ್ಲಿ ಅಲ್ಲಿನ ಜನತೆ ಜಾತೀ ರಹಿತರಾಗಿ ಅಭಿವೃದ್ಧಿ ಪರ ಸರಕಾರಕ್ಕೆ ಮತ ನೀಡುವ ಮೂಲಕ ಪರಿವರ್ತನೆಗೆ ನಾಂದಿ ಹಾಡಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತು ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಪರ ಮತ ಹಾಕುವ ಮೂಲಕ ಬಿಜೆಪಿ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ವಹಿಸಿದ್ದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಜಯರಾಮ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಪ್ರ. ಕಾರ್ಯದರ್ಶಿ ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್, ರಾಮಚಂದ್ರ ಬೈಕಂಪಾಡಿ, ಪ್ರ.ಕಾರ್ಯದರ್ಶಿ ಕಿಶೋರ್ ರೈ, ಮಂಗಳೂರು ಕ್ಷೇತ್ರ ಬಿಜೆಪಿ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಸಹಕಾರಿ ಧುರೀಣ, ಬಿಜೆಪಿ ಮುಖಂಡ ಟಿ.ಜಿ. ರಾಜಾರಾಮ ಭಟ್, ಕೋಟೆಕಾರು ಪಟ್ಟಣ ಪಂಚಾಯತ್ ಅದ್ಯಕ್ಷ ಉದಯ ಕುಮಾರ್ ಶೆಟ್ಟಿ ಸುಳ್ಳೇಂಜೀರು, ತಾ. ಪಂ. ಸದಸ್ಯ ರಾಮಚಂದ್ರ ಕುಂಪಲ, ಮಾಜಿ ಶಾಸಕ ಯೋಗೀಶ್ ಭಟ್, ಕರ್ನಾಟಕ ರಾಜ್ಯ ಆಲ್ಪ ಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್, ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಲಲಿತಾ ಸುಂದರ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ನಿತಿನ್ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತ ಪ್ರ. ಕಾರ್ಯದರ್ಶಿ ಡಾ| ಮುನೀರ್ ಬಾವ, ಎಪಿಎಂಸಿ ಸದಸ್ಯ ವಿಠಲ ಸಾಲಿಯಾನ್ , ಮಾಜಿ ಸಚಿವ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಸೀತಾರಾಮ ಬಂಗೇರ ಅವರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಸ್ವಾಗತಿಸಿದರು. ರಾಜೇಶ ಶೆಟ್ಟಿ ಪಜೀರು ಗುತ್ತು ಮತ್ತು ಯವಂತ ಅಮೀನ್ ಕಾರ್ಯಕ್ರಮ ನಿರ್ವಹಿಸಿದರು. ಯುವ ಮೋರ್ಚಾ ಅಧ್ಯಕ್ಷ ಸುಜಿತ್ ಮಾಡೂರು ಸನ್ಮಾನ ಪತ್ರ ವಾಚಿಸಿದರು. ಕ್ಷೇತ್ರ ಪ್ರ. ಕಾರ್ಯದರ್ಶಿ ಮನೋಜ್ ಆಚಾರ್ಯ ಸಹಕರಿಸಿದರು.ಕ್ಷೇತ್ರ ಪ್ರ. ಕಾರ್ಯದರ್ಶಿ ಮೋಹನ್‍ರಾಜ್ ಕೆ.ಆರ್ ವಂದಿಸಿದರು.

ಚಿತ್ರ : ಯೋಗೀಶ್ ಕೊಪ್ಪಾಳ ಉಳಿಯ

Exit mobile version