ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಉಳ್ಳಾಲ: ಕುಂಪಲ ಗುರು ನಗರದ ಶ್ರೀ ಮಾರುತಿ ಮಠದ ಶ್ರೀಕೃಷ್ಣ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯುತ್ತಿರುವ 108 ದಿನಗಳ ಆಹೋರಾತ್ರಿ ಭಜನಾ ಕಾರ್ಯಕ್ರಮದ 100ನೇ ದಿನದ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ಕಂಚಿನ ಪ್ರಭಾವಳಿ ಮತ್ತು ಹಸಿರು ಹೊರೆಕಾಣಿಕೆ ಶ್ರೀ ಅಮೃತಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಅಂಬಿಕಾರೋಡ್ ಗಟ್ಟಿ ಸಮಾಜ ಭವನದ ಬಳಿಯಿಂದ ಶ್ರೀ ಕ್ಷೇತ್ರಕ್ಕೆ ನಡೆದ ಹೊರೆ ಕಾಣಿಕೆ ಮೆರವಣಿಗೆಗೆ ಸೋಮೇಶ್ವರದ ದಿನೇಶ್ ಫಣಿಕ್ಕರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷರು, ಸದಸ್ಯರು, ಭಜನಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.








