ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಮುಡಿಪು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಸ್ಪರ್ಧೆಗಳಂತಹ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜ್ಞಾನ ಕೌಶಲ್ಯವನ್ನು ವೃದ್ದಿಸಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಹೇಳಿದರು.ಅವರು ಮಂಗಳೂರು ವಿವಿ ಬಯಲು ರಂಗಮಂದಿರದಲ್ಲಿ ಗುರುವಾರ ಮಂಗಳೂರು ವಿವಿ ಕ್ಯಾಂಪಸ್‍ನಲ್ಲಿರುವ ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮಂಗಳೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಕೌಶಲವನ್ನು ವೃದ್ಧಿಸಿಕೊಳ್ಳಲು ವಿವಿ ಕ್ಯಾಂಪಸ್‍ನಲ್ಲಿ ಉತ್ತಮ ಅವಕಾಶಗಳಿವೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಲ್ಲಿರುವ ಬಿಎ, ಬಿಕಾಂ ಜೊತೆಗೆ ವಿಜ್ಞಾನ ವಿಭಾಗವನ್ನು ಯೋಜನೆಯನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಅನಿತಾ ರವಿಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿಲ್ಲಿ ಶಿಕ್ಷಣದ ಜೊತೆಗೆ ಕೌಶಲ ವೃದ್ಧಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗದ ಜೊತೆಗೆ ವಿವಿಧ ಕಾಲೇಜಿನಲ್ಲಿ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಕಾಲೇಜಿಗೂ ಕೀರ್ತಿಯನ್ನು ತಂದಿದ್ದಾರೆ. ಅಲ್ಲದೆ ಇಲ್ಲಿರುವ ಉತ್ತಮ ಉಪನ್ಯಾಸಕ ವೃಂದವೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ರಝಾಕ್, ಉಪನ್ಯಾಸಕಿ ರಾಧಿಕಾ ಕ್ಯಾಸ್ಟಲಿನೋ, ಶೃತಿ ಉಪಸ್ಥಿತರಿದ್ದರು.
ಉಪನ್ಯಾಸಕರಾದ ಚೈತ್ರಲಕ್ಷ್ಮೀ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು. ಶಾಹಿದ್ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರ ಹೆಸರು ವಾಚಿಸಿದರು.