ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಉಳ್ಳಾಲ: ಹಿರಾ ಮಹಿಳಾ ಕಾಲೇಜು, ಬಬ್ಬುಕಟ್ಟೆ ಇದರ ವತಿಯಿಂದ 2016-17ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವು ಹಿರಾ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ, ಅಂತರ್ ಕಾಲೇಜು ಮಟ್ಟದಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಮೂಹ ಮಾಧ್ಯಮ ಮತ್ತು ಪ್ರಸ್ತುತ ಸಮಾಜ ಎಂಬ ವಿಷಯದ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಪ್ರಥಮ ಬಹುಮಾನವನ್ನು ಸಂತ ಅಲೋಶಿಯಸ್ ಕಾಲೇಜಿನ ಕು. ದೀಪ್ತಿ ಜಾರ್ಜ್, ದ್ವಿತೀಯ ಬಹುಮಾನವನ್ನು ಕು. ವಿಜಯಲಕ್ಷ್ಮಿ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ತೃತೀಯ ಬಹುಮಾನವನ್ನು ಕು. ದಿಶಾ ಎಂ. ಶೆಟ್ಟಿ, ಕೆನರಾ ಕಾಲೇಜು, ಮಂಗಳೂರು ಪಡೆದಿರುತ್ತಾರೆ.
ಕ್ರಮವಾಗಿ ರೂ.5000/-, ರೂ.3000/- ರೂ. 2000/- ನಗದು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿಜೇತರಿಗೆ ವಿತರಿಸಲಾಯಿತು. 2015-16ನೇ ಸಾಲಿನಲ್ಲಿ ಅತ್ಯಕ ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.