ಉಳ್ಳಾಲ ನ್ಯೂಸ್ ನೆಟ್‍ವರ್ಕ್
ನದಿಯಲ್ಲಿ ಬಟ್ಟೆ ಒಗೆಯುತ್ತಿದ್ದ ಸಂದರ್ಭ ಸಿಡಿಲು ಬಡಿದು ಮೂವರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟುವಿನ ನೇತ್ರಾವತಿ ನದಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಸಮಗ್ರ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಬಂದಿದ್ದ ಕಾರ್ಮಿಕರಾದ ಜಯ್ಯಮ್ಮ(28). ಕಣಕಮ್ಮ(29),ಶಶಿಕಲಾ(7) ಸಾವನ್ನಪ್ಪಿದ ದುದೈ೯ವಿಗಳು. ಘಟನೆಯಲ್ಲಿ ಲಿಖಿತ(2) ಗಂಭೀರ ಗಾಯಗೊಂಡಿದ್ದು ಸ್ಥಿತಿ ಚಿಂತಾಜನಕವಾಗಿದೆ.
ಇಬ್ಬರು ಮಕ್ಕಳು ಸೇರಿ ನಾಲ್ವರು ನದಿಯಲ್ಲಿ ಬಟ್ಟೆ ಒಗೆಯುತ್ತಿದ್ದರು ವೇಳೆ ಮೂವರು ಸಾವನ್ನಪ್ಪಿದ್ದು ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ



