Site icon Ullalavani

ಎ.16: ಎಸ್‍ವೈಎಸ್ ಕೆ.ಸಿ ರೋಡ್ ಸೆಂಟರ್ ಮಹಾ ಸಮ್ಮೇಳನ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಕರ್ನಾಟಕ ರಾಜ್ಯ ಎಸ್‍ವೈಎಸ್ ಇದರ ಸೆಂಟರ್ ಸಮ್ಮೇಳನದ ಪ್ರಯುಕ್ತ ಎಸ್‍ವೈಎಸ್ ಕೆ.ಸಿ ರೋಡ್ ಸೆಂಟರ್ ಮಹಾ ಸಮ್ಮೇಳನ ಎ.16ರಂದು ಸಂಜೆ 5ಗಂಟೆಗೆ ಕೆ.ಸಿ ನಗರ ಜಂಕ್ಷನ್‍ನಲ್ಲಿ ನಡೆಯಲಿದೆ.

ಸಯ್ಯದ್ ಸಿ.ಟಿ.ಎಂ ಸಲೀಂ ಅಸ್ಸಖಾಫ್ ತಂಙಳ್ ದುಅ ನೇತೃತ್ವವಹಿಸಲಿದ್ದು, ಸೆಂಟರ್ ಅಧ್ಯಕ್ಷ ಎನ್.ಎಸ್ ಉಮರ್ ಮಾಸ್ಟರ್ ಅಧ್ಯಕ್ಷತೆಯಲ್ಲಿ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡ್ ಉದ್ಘಾಟಿಸಲ್ಲಿದ್ದಾರೆ. ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್-ಕಾಮಿಲ್ ಮತ್ತು ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version