Site icon Ullalavani

ಕಾರ್ಮಿಕನ ಸಾವು :ಮೃತನ ಕುಟುಂಬಕ್ಕೆ ಪರಿಹಾರಕ್ಕಾಗಿ ತು.ರ.ವೇ ಆಗ್ರಹ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಬೋರ್‍ವೆಲ್ ಕೆಲಸ ನಿರ್ವಹಿಸುವ ಸಂದರ್ಭ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕಿದ್ದು, ಜಿಲ್ಲಾಡಳಿತವೂ ಹೆಚ್ಚಿನ ಮುತುವರ್ಜಿ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಆಗ್ರಹಿಸಿದ್ದಾರೆ.

ಗುರುವಾರ ತಡರಾತ್ರಿ ಕೋಟೆಕಾರು ಬೀರಿ ಸಮೀಪ ಬೋರ್‍ವೆಲ್ ನ ಮೋಟರಿನ ದುರಸ್ತಿ ಕಾರ್ಯದಲ್ಲಿದ್ದ ಸಂದರ್ಭ ಕೊಣಾಜೆ ಅಡ್ಕರೆಪಡ್ಪು ನಿವಾಸಿ ಉಸ್ಮಾನ್ ಎಂಬವರು ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದರು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ತುಳುನಾಡು ರಕ್ಷಣಾ ವೇದಿಕೆ, ಕಾಮಗಾರಿ ವೇಳೆ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರನ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. ಕೋಟೆಕಾರು ಪಟ್ಟಣ ಪಂಚಾಯಿತಿಯ ಕಾಮಗಾರಿ ನಡೆಸುತ್ತಿದ್ದುದರಿಂದ , ಸಂಬಂಧಿಸಿದ ಪಂಚಾಯಿತಿ ಕೂಡಾ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕಿದೆ ಯಾವುದೇ ಕಾಮಗಾರಿ ವೇಳೆ ಕಾರ್ಮಿಕನ ಸುರಕ್ಷತೆ ಅತ್ಯಾವಶ್ಯಕ . ಆದರೆ ಪ್ರಸ್ತುತ ಘಟನೆಯಲ್ಲಿ ಅದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಕೂಡಲೇ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ಸೂಕ್ತ ಪರಿಹಾರದೊಂದಿಗೆ ಮೃತನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version