ಉಳ್ಳಾಲ ನ್ಯೂಸ್ ನೆಟ್‍ವರ್ಕ್
ವಿಟ್ಲ: ಕರೋಪಾಡಿ ಗ್ರಾ. ಪಂ ಉಪಾಧ್ಯಕ್ಷನನ್ನು ಮುಸುಕುಧಾರಿಗಳ ತಂಡ ಬರ್ಬರವಾಗಿ ತಲವಾರಿನಿಂದ ಕಡಿದ ಪರಿಣಾಮ ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪೂರ್ವದ್ವೇಷದಿಂದ ಹತ್ಯೆ ನಡೆಸಿರುವ ಶಂಕೆ ಇದೆ.
ಬಂಟ್ವಾಳ ತಾಪಂ ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿಯವರ ಪುತ್ರ, ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿಯವರ ಮೇಲೆ ಪಂಚಾಯತ್ ಆವರಣದಲ್ಲೇ ನಾಲ್ವರು ಮುಸುಕುಧಾರಿಗಳ ತಂಡ ತಲವಾರುಗಳಿಂದ ದಾಳಿ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.







