Site icon Ullalavani

15ರ ಹರೆಯದ ಬಾಲಕಿ ನೇಣುಬಿಗಿದು ಆತ್ಮಹತ್ಯೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ನರಿಂಗಾನ: ನರಿಂಗಾನ ಗ್ರಾಮದ ನೆತ್ತಿಲಪದವು ಕೆದಂಬಾಡಿ ಎಂಬಲ್ಲಿ 15 ಹರೆಯದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ.

ಆತ್ಮಹತ್ಯೆಗೈದ ಬಾಲಕಿಯನ್ನು ನೆತ್ತಿಲ ಪದವಿನ ಯೂಸೂಫ್ ಎಂಬವರ ಪುತ್ರಿ ಶೈನಾ(15) ಎಂದು ಗುರುತಿಸಲಾಗಿದೆ. ಈಕೆ ಮನೆಯ ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಈಕೆಯ ತಂದೆ ಯೂಸುಫ್‍ಗೆ ಎರಡು ಮದುವೆಯಾಗಿದ್ದು, ಆತ್ಮಹತ್ಯೆಗೈದವಳು ಎರಡನೇ ಪತ್ನಿಯ ಮಗಳಾಗಿದ್ದಾಳೆ. ಯೂಸುಫ್‍ನ ಎರಡನೇ ಪತ್ನಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version