Site icon Ullalavani

ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಖಾಯಂ: ಸುಪ್ರಿಂಕೋರ್ಟು

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ನವದೆಹಲಿ: ದೇಶಾದ್ಯಂತ ವ್ಯಾಪಕ ಪ್ರತಿಭಟನೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯ ಸಾಮೂಹಿಕ ತ್ಯಾಚಾರ ಹಾಗೂ ಸಾವಿಗೆ ಕಾರಣರಾಗಿದ್ದ 4 ಜನ ಅಪರಾಧಿಗಳಿಗೆ ದೆಹಲಿ ಕೋರ್ಟು ನೀಡಿದ್ದ ಮರಣದಂಡನೆಯನ್ನು ಖಾಯಂಗೊಳಿಸುವ ಮಹತ್ತರವಾದ ತೀರ್ಪನ್ನು ಸುಪ್ರೀಂ ಕೋರ್ಟು ಶುಕ್ರವಾರ ಹೊರಡಿಸಿದೆ.

2012 ಡಿಸೆಂಬರ್ 16ರಂದು ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ನ್ಯಾಯಮೂರ್ತಿ ಆರ್ ಭಾನುಮತಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಪ್ರಕರಣವನ್ನು ಅಪರೂಪದಲ್ಲೇ ಅಪರೂಪದ ಪ್ರಕರಣ ಎಂದು ಉಲ್ಲೇಖಿಸಿದ ನ್ಯಾಯ ಮೂರ್ತಿಗಳು,ಸಂತ್ರಸ್ತೆಯ ಮರಣಪೂರ್ವದ ಹೇಳಿಕೆ ಸತ್ಯಾಂಶದಿಂದ ಕೂಡಿದೆ. ಇದರಲ್ಲಿ ಯಾವುದೇ ಅನುಮಾನಕ್ಕೆ ಆಸ್ಪದ ಇಲ್ಲ ಈ ಆರೋಪಿಗಳು ಯಾವುದೇ ರೀತಿಯಲ್ಲೂ ಸುಧಾರಣೆ ಕಾಣುವ ಅಥವಾ ಇವರ ಮನಸ್ಥಿತಿ ಯಾವುದೇ ರೀತಿಯಲ್ಲೂ ಬದಲಾಗುವ ಸಂಭವವೂ ಇರದ ಕಾರಣ ಈ ತೀರ್ಪು ನೀಡಲಾಗುತ್ತಿದೆ ಎಂದಿದ್ದಾರೆ.

2013ರಲ್ಲಿ ದೆಹಲಿಯ ವಿಚಾರಣಾಧೀನ ನ್ಯಾಯಾಲಯ ಗಲ್ಲುಶಿಕ್ಷೆ ನೀಡಿ ಆದೇಶ ನೀಡಿತ್ತು. ಅದರ ಮರು ವರ್ಷ ದೆಹಲಿ ಹೈಕೋರ್ಟ್ ಕಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ಆರೋಪಿಗಳಾದ ಅಕ್ಷಯ್ ಠಾಕೂರ್, ವಿನಯ್ ಶರ್ಮಾ, ಪವನ್ ಗುಪ್ತಾ ಹಾಗೂ ಮುಕೇಶ್ ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದು, ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ

Exit mobile version