Site icon Ullalavani

ಕಾರು -ಬೈಕ್ ಅಪಘಾತ: ಸವಾರ ಗಂಭೀರ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಮಂಜನಾಡಿ:ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು, ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಬುಧವಾರ ನಡೆದಿದೆ.

ಮಂಜನಾಡಿ ಗ್ರಾಮದ ಕಲ್ಕಟ್ಟದ ತಟ್ಲ ತಿರುವು ಸಮೀಪ ಕಾರೊಂದು ಎದುರಿನಲ್ಲಿದ್ದ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದರೆ, ಸಹಸವಾರ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version