ಉಳ್ಳಾಲ ನ್ಯೂಸ್ ನೆಟ್ವರ್ಕ್
ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎ.ಮಹಮ್ಮದ್ ಬಶೀರ್ ಕಿನ್ಯ ಮತ್ತು ಉಪಾಧ್ಯಕ್ಷರಾಗಿ ಪದ್ಮಾವತಿ ಶೆಟ್ಟಿ ಪೆರ್ಮನ್ನೂರು ಆಯ್ಕೆಯಾದರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾ ಅಧಿಕಾರಿಯಾಗಿ ಬಂಟ್ವಾಳ ತಾಲೂಕಿನ ಸಹಕಾರ ಅಬಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ಕೆ. ಚುನವಾಣಾ ಪ್ರಕ್ರಿಯೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷ ಕೆ. ಕೃಷ್ಣಪ್ಪ ಸಾಲ್ಯಾನ್ ಕುತ್ತಾರ್ , ನಿರ್ಗಮಿತ ಉಪಾಧ್ಯಕ್ಷ ಮೊೈದಿನ್ ಕುಂಞ ಮರಾಠಿಮೂಲೆ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ವೇಣುಗೋಪಾಲ್, ನಿರ್ದೇಶಕರಾದ ಗಣೇಶ್ ಶೆಟ್ಟಿ ರಕ್ಷಾ ತಲಪಾಡಿ, ಯು. ಅರುಣ್ ಕುಮಾರ್ ಉಳ್ಳಾಲ್, ಉದಯ ಕುಮಾರ್ ಶೆಟ್ಟಿ ಕೊಂಡಾಣಗುತ್ತು, ನಾರಾಯಣ ತಲಪಾಡಿ, ರಾಜೀವಿ ಪಿಲಾರ್. ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಬ್ಯಾಂಕ್ನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ, ಕಿನ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯ, ಸದಸ್ಯರಾದ ಕೆ.ಬಿ. ಅಬುಸಾಲಿ, ಮಹಮ್ಮದ್, ಫಾರೂಕ್ ಅಭಿನಂದನೆ ಸಲ್ಲಿಸಿದರು.






