Site icon Ullalavani

ಮುನ್ನೂರು:ತ್ಯಾಜ್ಯ ಮುಕ್ತ ಸೌಹಾರ್ದ ಸಂಕಲ್ಪಕ್ಕೆಚಾಲನೆ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಮುನ್ನೂರು :ತ್ಯಾಜ್ಯ ಮುಕ್ತ ಗ್ರಾಮದ ಕನಸು ನನಸಾಗಿಸಲು ಕೇವಲ ಜನಪ್ರತಿನಿಧಿಗಳಿಂದ ಹಾಗೂ ಅಧಿಕಾರಿಗಳಿಂದ ಸಾಧ್ಯವಿಲ್ಲ. ಇವರ ಜೊತೆಗೆ ಊರಿನ ನಾಗರಿಕರೆಲ್ಲರೂ ಒಂದಾಗಿ ತಮ್ಮ ಪರಿಸರ ತ್ಯಾಜ್ಯ ಮುಕ್ತ ಆಗಬೇಕೆಂದು ಸಂಕಲ್ಪ ಮಾಡಿದರೆ ಮಾತ್ರ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಅರ್.ಉಮೇಶ್ ಹೇಳಿದ್ದಾರೆ.

ಅವರು ಪ್ರಜ್ಞಾ ಸಲಹಾ ಕೇಂದ್ರ, ಜನ ಶಿಕ್ಷಣ ಟ್ರಸ್ಟ್, ದುರ್ಗಾ ವಾಹಿನಿ ಮಹಿಳಾ ಮಂಡಲ ಕುತ್ತಾರು ಮತ್ತು ಪ್ರೇರಣಾ ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ತ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣ-ಸೌಹಾರ್ದ ಸಂಕಲ್ಪ ಕಾರ್ಯಕ್ರಮಕ್ಕೆ ಕುತ್ತಾರು ಮಹಿಳಾ ಮಂಡಲ ಸಭಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮಿ ಗಟ್ಟಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್, ತಾಲೂಕು ಪಂಚಾಯತ್ ಸದಸ್ಯೆ ವಿಲ್ಮಾ ಆಲ್ಫ್ರೆಡ್ ಡಿಸೋಜ,ಮುನ್ನೂರು ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುರ್ರಹ್ಮಾನ್,ಜನ ಶಿಕ್ಷಣ ಸೇವಾ ಟ್ರಸ್ಟ್ ನಿರ್ದೇಶಕ ಶೀನ ಶೆಟ್ಟಿ, ಮುನ್ನೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧೀರ್ ಉಪಸ್ಥಿತರಿದ್ದರು.

ಪ್ರಜ್ಞಾ ಸಲಹಾ ಕೇಂದ್ರದ ಯೋಜನಾ ಅಧಿಕಾರಿ ವಿಲಿಯಂ ಪ್ರಾಸ್ತವಿಕವಾಗಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿ ಸುನೀತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
ಫಲಾನುಭವಿಗಳಿಗೆ ಕಾಂಪೋಸ್ಟ್ ಗೊಬ್ಬರ ಮಾಡಲು ಪೈಪ್ ನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

Exit mobile version