Site icon Ullalavani

ಜೂ.3: ಗೋಹತ್ಯೆ ನಿಷೇಧ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಸ್ವಾಮೀಜಿ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಮಂಗಳೂರು: ಎಸ್ ಎಸ್ ಎಫ್ ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಜೂ.3 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಆಯೋಜಿಸಿರುವ ಕೇಂದ್ರ ಸರಕಾರ ಜಾರಿಗೊಳಿಸಿರುವ ಗೋಹತ್ಯೆ ನಿಷೇಧ ಕಾನೂನು ವಿರುದ್ಧದ ಪ್ರತಿಭಟನೆಯಲ್ಲಿ ಮೈಸೂರು ಮೂಲದ ಮಠವೊಂದರ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಎಸ್ ಎಸ್ ಎಫ್ ತಿಳಿಸಿದೆ.

ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಮೈಸೂರು ಮೂಲದ ಮಠವೊಂದರ ಸ್ವಾಮೀಜಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಅಲ್ಲದೆ ಎನ್.ಕೆ.ಎಂ ಶಾಫಿ ಸಅದಿ ಬೆಂಗಳೂರು, ಐವನ್ ಡಿ’ಸೋಜ ಮಂಗಳೂರು, ಮಾಜಿ ಮೇಯರ್ ಆಶ್ರಫ್ ಕೆ, ದಲಿತ ಸಂಘರ್ಷ ಸಮಿತಿಯ ಚಂದು ಎಲ್, ಶೇಕರ್. ಎಲ್, ಉಮರ್ ಸಖಾಫಿ ಕಂಬಳಬೆಟ್ಟು, ಕೆ.ಕೆ,ಎಂ ಕಾಮಿಲ್ ಸಖಾಫಿ, ಹಾಫಿಳ್ ಯಾಕೂಬ್ ಸಅದಿ ನಾವೂರು ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದೇಶದ 85% ಜನರ ಆಹಾರ ಪದ್ದತಿಯಾಗಿರುವ ಮಾಂಸಹಾರವನ್ನು ನಿಷೇಧಿಸುವ ರೀತಿಯಲ್ಲಿ ಕೇಂದ್ರ ಸರಕಾರವು ಹೊಸ ಕಾನೂನಾದ ಗೋಹತ್ಯೆ ನಿಷೇಧವನ್ನು ಜಾರಿಗೆ ತಂದಿರುವುದನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದ್ದು, ಈ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಆಯೋಜಿಸಿರುವ ಕುರಿತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version