Site icon Ullalavani

ಅಪಘಾತಕ್ಕೀಡಾದ ಕಾರು ಮತ್ತು ಲಾರಿ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಟಿಪ್ಪರ್ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿರುವ ಘಟನೆ ರಾ.ಹೆ.66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಬುಧವಾರ ಸಂಜೆ ವೇಳೆ ಸಂಭವಿಸಿದೆ.

ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ಧಿಕ್ಕಿನಲ್ಲಿ ಸಾಗುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಾಪು , ಕುದ್ರು ಸಮೀಪ ಮಣ್ಣು ಹೇರಿಕೊಂಡು ಟಿಪ್ಪರ್ ಲಾರಿ ಅವ್ಯಾಹತವಾಗಿ ಸಾಗುತ್ತಿದ್ದು, ಹಲವು ಬಾರಿ ಅವಘಢಗಳಿಗೆ ಕಾರಣವಾಗುತ್ತಿದೆ. ಉಳ್ಳಾಲ ಪೊಲೀಸರು ಟಿಪ್ಪರ್ ಲಾರಿ ಚಾಲಕರ ವಿರುದ್ಧ ಕ್ರಮಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Exit mobile version