Site icon Ullalavani

ಗ್ರಾಮಾಭಿವೃಧ್ದಿಯಲ್ಲಿ ಸಂಘಟನೆ ಪಾತ್ರ : ಸೀತಾರಾಮ ಶೆಟ್ಟಿ

ಉಳ್ಳಾಲ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಮಾಹಿತಿ ನೀಡುವುದರೊಂದಿಗೆ ಆರೋಗ್ಯದ ಚಿಂತನೆಯಲ್ಲಿ ಸಂಘ ಸಂಸ್ಥೆಗಳು ಕೈ ಜೋಡಿಸಿದರೆ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಸಂತೃಪ್ತಿ ಸೇವಾ ಟ್ರಸ್ಟ್ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು.

ಸಂತೃಪ್ತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಮತ್ತು ಪಜೀರು ಗ್ರಾಮ ಪಂಚಾಯತ್ ಪಜೀರು ಇದರ ಉಚಿತ ವೈದ್ಯಕೀಯ ಶಿಬಿರ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷ ದೇವದಾಸ್ ಕಾಮತ್ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಯೇನೆಪೋಯ ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ| ಪೂನಂ ನಾಯಕ್, ಪಜೀರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ| ಸ್ಮಿತಾ, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸೇಸಪ್ಪ ಟೈಲರ್, ಎಪಿಎಮ್‍ಸಿ ಸದಸ್ಯ ಉಮರ್ ಪಜೀರು, ಪಜೀರು ಸಂತ ಮರಿಯಮ್ಮನವರ ಚರ್ಚ್ ನ ಉಪಾಧ್ಯಕ್ಷ ರೋಷನ್ ಪಜೀರು, ಮಂಗಳೂರು ವಿಶ್ವ ವಿದ್ಯಾನಿಲಯ ಪ್ರಚಾರ್ಯ ಪ್ರೋ| ಬಾಲಕೃಷ್ಣ ರಾವ್ ಉಪಸ್ಥಿತರಿದ್ದರು.

ಮಂಗಳೂರು ಸಂತೃಪ್ತಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಲೋಹಿತ್ ಪಜೀರು ಸ್ವಾಗತಿಸಿ , ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಗಳೂರು ಸಂತೃಪ್ತಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ನಿರ್ಮಲ್ ಭಟ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Exit mobile version