ಉಳ್ಳಾಲ ನ್ಯೂಸ್ ನೆಟ್ ವರ್ಕ್
ಕುರ್ನಾಡು: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಬೆಲೆಬಾಳುವ ಸೊತ್ತುಗಳನ್ನು ಕಳವುಗೈದಿರುವ ಘಟನೆ ಕುರ್ನಾಡು ಅಂಗಣೆಮಾರ್ ಎಂಬಲ್ಲಿ ನಿನ್ನೆ ಸಂಭವಿಸಿದೆ.
ಮಾರ್ಷಲ್ ಡಿಸೋಜಾ ಎಂಬವರ ಮನೆಯಲ್ಲಿ ಕಳವು ನಡೆದಿದೆ. ಮನೆಯೊಳಗೆ ಕಪಾಟಿನಲ್ಲಿರಿಸಲಾಗಿದ್ದ ರೂ.30,000 ನಗದು ಹಾಗೂ 15 ಪವನ್ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ. ಹಿಂದಿನ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಹಾಡಹಗಲೇ ಸೊತ್ತುಗಳನ್ನು ಕಳವುಗೈದಿದ್ದಾರೆ. ಮನೆಯಲ್ಲಿ ಯಾರೂ ಇರದ ಸಮಯದಲ್ಲಿ ಕೃತ್ಯ ನಡೆದಿದೆ. ಮನೆಮಂದಿ ಸಂಜೆ ವೇಳೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.