ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಬಬ್ಬುಕಟ್ಟೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,ಬೆಂಗಳೂರು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಸಾರ್ವಜನಿಕಕ ಶಿಕ್ಷಣ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ(ರಿ)ಮಂಗಳೂರು ಇವರ ಸಹಯೋಗದೊಂದಿಗೆ ಬಾಲ್ಯ ವಿವಾಹ ತಡೆ ಮತ್ತುಶಾಲೆ ಕಡೆ ನನ್ನ ನಡೆ ಕುರಿತು ಜಾಗೃತಿ ಆಂದೋಲನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಬ್ಬುಕಟ್ಟೆಯಲ್ಲಿ ನಡೆಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಳ್ಳಾಲ ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು,ಕಾನೂನು ತಜ್ಞೆ ಶ್ರೀಮತಿ ಗೌರಿ,ಮಂಗಳೂರು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶ್ಯಾಮಲಾ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹರ್ಷಲತಾ, ಸಮಾಜ ಸೇವಕಿ ಸುಹಾಸಿನಿ ಬಬ್ಬುಕಟ್ಟೆ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾಲಕ್ಷ್ಮಿ,ಉಪಸ್ಥಿತರಿದ್ದರು.
ಸರಕಾರಿ ಪ್ರೌಢ ಶಾಲೆ ಬಬ್ಬುಕಟ್ಟೆ ಮುಖ್ಯ ಶಿಕ್ಷಕಿ ಶ್ರೀಮತಿ ಉಷಾ ಸ್ವಾಗತಿಸಿದರು.ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಶಂಕರಿ ಕಾರ್ಯಕ್ರಮ ನಿರೂಪಿಸಿದರು.