ಉಳ್ಳಾಲ ನ್ಯೂಸ್ ನೆಟ್‍ವರ್ಕ್
ತೊಕ್ಕೊಟ್ಟು:ಇಲ್ಲಿನ ನಗರಸಭಾ ವತಿಯಿಂದ ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಪೌರಾಯುಕ್ತರ ಆದೇಶದ ಮೇರೆಗೆ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಗಳನ್ನು ಶನಿವಾರ ತೆರವುಗೊಳಿಸಲಾಯಿತು.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಸ್ವಚ್ಛ ತೊಕ್ಕೊಟ್ಟುವಿನ ಪರಿಕಲ್ಪನೆಗೆ ಉಳ್ಳಾಲ ನಗರಸಭೆಗೆ ಎಲ್ಲಾ ನಾಗರಿಕರು ಕೈ ಜೋಡಿಸಿ ಎಂದು ಉಳ್ಳಾಲ ನಗರಸಭೆ ಆಯುಕ್ತೆ ವಾಣಿ ಆಳ್ವ ತಿಳಿಸಿದರು.
ಶಿಯಾಳದ ಗೆರಟೆಯಲ್ಲಿ ಮಳೆಯ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡುವ ಬಗ್ಗೆ ಆರೋಗ್ಯ ಇಲಾಖೆ ಈ ಹಿಂದೆ ಎಚ್ಚರಿಸಿದರೂ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ತೊಕ್ಕೊಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ತೆರವುಗೊಳಿಸಿದ್ದೇವೆ ಎಂದು ಉಳ್ಳಾಲ ನಗರಸಭೆ ಆರೋಗ್ಯ ನಿರೀಕ್ಷಕ ರಾಜೇಶ್ ಹೇಳಿದರು.
ಕಾರ್ಯಾಚರಣೆ ವೇಳೆ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.


