Site icon Ullalavani

ಉಳ್ಳಾಲ ಪಾಂಡ್ಯರಾಜ್ ಕಾಲೇಜಿನಲ್ಲಿ ಎನ್ಎಸ್ಎಸ್ ಶಿಬಿರಕ್ಕೆ ಚಾಲನೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ದೇಶದ ಅಭಿವೃದ್ಧಿಯಲ್ಲಿ ಎನ್‍ಎಸ್‍ಎಸ್ ನ ಪಾತ್ರ ಮಹತ್ವದಾಗಿದೆ. ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಲ್ಲೂ  ನಾಯಕತ್ವ ಗುಣ ಬೆಳೆಸುವುದರ ಜೊತೆಗೆ ವೈಯಕ್ತಿಕ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಕೇವಲ ತರಗತಿಯ ಕೊಠಡಿಯಲ್ಲಿ ಸಿಗುವ ಶಿಕ್ಷಣಕ್ಕೆ ಜೋತುಬೀಳದೆ ಮಾನವೀಯ ಶಿಕ್ಷಣವನ್ನು ತಮ್ಮದಾಗಿಸಿಕೊಳ್ಳಬೇಕು. ಈ ಮೂಲಕ ಸಮಾಜಕ್ಕೆ ಏನಾದರೂ ಕೊಡುಗೆಯನ್ನು ನೀಡುವುದರ ಜೊತೆಗೆ ಸಮಾಜಿಮುಖಿ ಕಾರ್ಯಗಳು ಇಂದಿನ ಯುವ ಸಮುದಾಯಗಳಿಂದ ನಡೆಯಬೇಕಿದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕೆ. ಪಾಂಡ್ಯರಾಜ ಬಲ್ಲಾಳ್ ಟ್ರಸ್ಟ್‍ನ ಮೆನೇಜಿಂಗ್ ಟ್ರಸ್ಟಿ ಡಾ. ಪ್ರಿಯಾ ಕೆ. ಬಲ್ಲಾಳ್ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕೆ. ಪಾಂಡ್ಯರಾಜ ಬಲ್ಲಾಳ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಉಪಸ್ಥಿತರಿದ್ದರು.

ಬಿ.ಎಸ್ಸಿ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿ ಮೇರಿ ಪೀಟರ್ ಸ್ವಾಗತಿಸಿದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಕೈನಿ ಸಿಸಿಲಿಯಾ ಕ್ಯಾ. ಗಣೇಶ್ ಕಾರ್ಣಿಕ್ ಅವರನ್ನು ಪರಿಚಯಿಸಿದರು. ಚೈತ್ರಾ ನಾಯಕ್ ಶಿಬಿರದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಎಸ್ಸಿ ನರ್ಸಿಂಗ್ ಎರಡನೆಯ ವರ್ಷದ ವಿದ್ಯಾರ್ಥಿಗಳಾದ ಅಂಜುಮೋಳ್ ಜಾರ್ಜ್ ಹಾಗೂ ಕೃಷ್ಣ ಸುಗೇಶ್ ಕಾರ್ಯಕ್ರಮ ನಿರೂಪಿಸಿದರು. ಬಿಎಸ್ಸಿ ನರ್ಸಿಂಗ್ ಎರಡನೆಯ ವರ್ಷದ ವಿದ್ಯಾರ್ಥಿನಿ ಅನೀನಾ ನೌಶಾದ್ ವಂದಿಸಿದರು.

 

Exit mobile version