ಉಳ್ಳಾಲ ನ್ಯೂಸ್ ನೆಟ್‍ವರ್ಕ್
ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಎರಡು ಲಾರಿಗಳನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ತೊಕ್ಕೊಟ್ಟು ಸಮೀಪ ಕೆ.ಎಲ್.38.129 ನೋಂದಾಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತೊಕ್ಕೊಟ್ಟು ಸಮೀಪ ವಶಪಡಿಸಿಕೊಂಡರೆ 10 ಚಕ್ರದ ಲಾರಿಯನ್ನು ಉಳ್ಳಾಲ ಸಮೀಪ ವಶಪಡಿಸಿಕೊಳ್ಳಲಾಗಿದೆ. ಎರಡು ವಾಹನಗಳು ಅಕ್ರಮವಾಗಿ ಕೇರಳಕ್ಕೆ ಮರುಳು ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಲಾರಿ ಚಾಲಕರ ಬಗ್ಗೆ ಯಾವುದೇ ಮಾಹಿತಿ ಇನ್ನು ಲಭ್ಯವಾಗಿಲ್ಲ.



