ಉಳ್ಳಾಲ ನ್ಯೂಸ್ ನೆಟ್ವರ್ಕ್
ಬೆಂಜನಪದವು : ರಿಕ್ಷಾ ಚಾಲಕ ಹಾಗೂ ಎಸ್ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮಲ್ಲೂರು ಕಲಾಯಿ ನಿವಾಸಿ ಅಶ್ರಫ್(35) ಎಂದು ಗುರುತಿಸಲಾಗಿದೆ. ಕಲಾಯಿಯಲ್ಲಿ ರಿಕ್ಷಾ ಚಾಲಕರಾಗಿದ್ದ ಅಶ್ರಫ್ರನ್ನು ಬಾಡಿಗೆಯ ನೆಪದಲ್ಲಿ ಕರೆದೊಯ್ದು ದುಷ್ಕರ್ಮಿಗಳು ಬೆಂಜನಪದವು ಬಳಿ ಮಾರಕಾಯುಧಗಳಿಂದ ಕೊಚ್ಚಿ ಹತ್ಯೆಗೈದಿರುವುದಾಗಿ ತಿಳಿದುಬಂದಿದೆ.
ಎಸ್ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಅಶ್ರಫ್ ಕಲಾಯಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ, ಬಳಿಕ ಹೊಂಡಮಯವಾಗಿರುವ ಕಲಾಯಿ ರಸ್ತೆಯ ದುರಸ್ತಿಗೊಳಿಸಲು ಸಾರ್ವಜನಿಕರೊಂದಿಗೆ ಶ್ರಮದಾನ ಮಾಡಿದ್ದರು. ಆ ಬಳಿಕ ಅವರ ಆಟೋ ರಿಕ್ಷಾವನ್ನು ಬಾಡಿಗೆಯ ನೆಪದಲ್ಲಿ ಕರೆದೊಯ್ದ ದುಷ್ಕರ್ಮಿಗಳು ಬೆಂಜನಪದವು ಎಂಬಲ್ಲಿ ತಲವಾರು ದಾಳಿ ನಡೆಸಿ ಭೀಕರವಾಗಿ ಹತೈಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೆÇಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.


