Site icon Ullalavani

ಸೋಮೇಶ್ವರ:ಯೋಗ ದಿನಾಚರಣೆ

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಸೋಮೇಶ್ವರ: ಅಂತರಾಷ್ಟ್ರಿಯ ಯೋಗ ದಿನಾಚರಣೆಯ ಅಂಗವಾಗಿ ಬುಧವಾರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಮಂಗಳೂರು ಘಟಕ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶ್ವಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರಸ್ವತ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಮಹೇಶ್ ಎಲ್. ಬೊಂಡಾಲ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ವಯಂ ಸೇವಕಿ ಶಕುಂತಲಾ, ಅಮಿತಾ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ಪಿ., ಉಪಸ್ಥಿತರಿದ್ದರು.

ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಸಭಾ ಕಾರ್ಯಕ್ರಮದ ಬಳಿಕ ಪ್ರಾತ್ಯಕ್ಷಿಕೆಯ ಮೂಲಕ ವಿವಿಧ ಯೋಗಾಸನಗಳನ್ನು ಶಾಲಾ ಶಿಕ್ಷಕರೂ, ಶಿಕ್ಷಕೇತರ ವೃಂದದವರು , ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version