Site icon Ullalavani

ಕಾರು ಢಿಕ್ಕಿ : ಅಪರಿಚಿತ ವ್ಯಕ್ತಿ ಮೃತ್ಯು

ಉಳ್ಳಾಲ ನ್ಯೂಸ್ ನೆಟ್‍ವರ್ಕ್

ಉಳ್ಳಾಲ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಪಾದಚಾರಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಜೂ.23ರಂದು ರಾ.ಹೆ.66 ರ ತಲಪಾಡಿ ದಿವ್ಯಾಶ್ರೀ ಬಾರಿನ ಎದುರುಗಡೆ ಅಪಘಾತ ಸಂಭವಿಸಿತ್ತು. ಮಂಗಳೂರಿನಿಂದ ಕೇರಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಬಂದ ಚಾಲಕ ರಸ್ತೆ ಬದಿಯಲ್ಲಿ ನಿಂತಿದ್ದ ಸುಮಾರು 50ರ ಹರೆಯದ ಅಪರಿಚಿತ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಅವರನ್ನು ನವಯುಗ ಸಂಸ್ಥೆಗೆ ಸೇರಿದ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಸಂಬಂಧ ಭಾಸ್ಕರ್ ಶೆಟ್ಟಿ ಎಂಬವರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾರೀಸುದಾರರು ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

Exit mobile version